ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ನಲ್ಲಿ ಹಣ ದುರುಪಯೋಗ ಆರೋಪ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಜೀವ ಸದಸ್ಯತ್ವದಿಂದ ಡಾ. ಮಹೇಶ್ ಜೋಶಿ ವಜಾಗೊಳಿಸಲಾಗಿದೆ. ಅವರನ್ನು ವಜಾಗೊಳಿಸಿ ಕಸಾಪ ಆಡಳಿತಾಧಿಕಾರಿ ದಯಾನಂದ್ ಆದೇಶಿಸಿದ್ದಾರೆ
ಕನ್ನಡ ಸಾಹಿತ್ಯ ಪರಿಷತ್ ನಲ್ಲಿ ಹಣ ದುರುಪಯೋಗ ಮತ್ತು ಕರ್ತವ್ಯ ಲೋಪ ದೃಢಪಟ್ಟ ಹಿನ್ನೆಲೆಯಲ್ಲಿ ಡಾ.ಮಹೇಶ್ ಜೋಶಿಯವರನ್ನು ಪರಿಷತ್ ಅಜೀವ ಸದಸ್ಯತ್ವ ವಜಾಗೊಳಿಸಲಾಗಿದೆ ಎಂದು ಹೈಕೋರ್ಟ್ ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.
ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳ ಕಾರ್ಯವೈಖರಿ, ಅನುದಾನ ಮತ್ತು ಖರ್ಚು ವೆಚ್ಚಗಳ ಕುರಿತು ವಿಚಾರಣೆ ನಡೆಸಲು ತನಿಖಾಧಿಕಾರಿ ನೇಮಕ ಮಾಡಿ 2025ರ ಜೂನ್ 26ರಂದು ಮತ್ತು 30ರಂದು ಸಹಕಾರ ಸಂಘಗಳ ನೋಂದಣಾಧಿಕಾರಿ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಮಹೇಶ್ ಜೋಶಿ ಸಲ್ಲಿಸಿರುವ ಅರ್ಜಿ ಹೈಕೋರ್ಟ್ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ವಿಚಾರಣೆಯ ವೇಳೆ ರಾಜ್ಯ ಪರ ವಕಿಲರು, ಮಹೇಶ್ ಜೋಶಿ ಅವರ ವಿರುದ್ಧ ಆಪಾದನೆಗಳು ಕೇಳಿ ಬಂದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿಚಾರಣೆ ನಡೆಸಿದ್ದು, ಈ ವಿಚಾರಣೆಯಲ್ಲಿ ಜೋಶಿಯವರ ಮೇಲಿನ ಆರೋಪಗಳು ದೃಢಪಟ್ಟ ಹಿನ್ನೆಲೆಯಲ್ಲಿ ಕಸಾಪದ ಅವರ ಅಜೀವ ಸದಸ್ಯತ್ವ ವಜಾಗೊಳಿಸಿ ಆಡಳಿತಾಧಿಕಾರಿ ಆದೇಶ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಮಹೇಶ್ ಜೋಶಿ ಪರ ವಕೀಲರ ವಾದ ಆರಿಸಲು ನ್ಯಾಯಪೀಠ ಅರ್ಜಿ ವಿಚಾರಣೆಯನ್ನು ಜೂನ್ 19ಕ್ಕೆ ಮುಂದೂಡಿದೆ.

































