ದೆಹಲಿ: ಭಾರತದ ಅತ್ಯಂತ ದೀರ್ಘಾವಧಿ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನ ಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಶುಭ ಕೋರಿದ್ದಾರೆ.
ಮೋದಿ ಅವರು ಬುಧವಾರದಂದು ಕಚೇರಿಯಲ್ಲಿ ಸತತ 4,399 ದಿನಗಳ ಅಧಿಕಾರಾವಧಿಯನ್ನು ಪೂರೈಸುವ ಮೂಲಕ, ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ದಾಖಲೆಯನ್ನು ಮೀರಿ, ದೇಶದ ಅತ್ಯಂತ ದೀರ್ಘಾವಧಿ ಸೇವೆ ಸಲ್ಲಿಸಿದ ಪ್ರಧಾನಿ ಎಂಬ ಮೈಲಿಗಲ್ಲನ್ನು ತಲುಪಿದ್ದಾರೆ.
”ಭಾರತದ ಅತ್ಯಂತ ದೀರ್ಘಾವಧಿ ಸೇವೆ ಸಲ್ಲಿಸಿದ ಪ್ರಧಾನ ಮಂತ್ರಿಯಾದ ನನ್ನ ಸ್ನೇಹಿತ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು – ಮತ್ತು ಅವರು ಒಬ್ಬ ಶ್ರೇಷ್ಠ ನಾಯಕರಾಗಿದ್ದಾರೆ” ಎಂದು ಟ್ರಂಪ್ ತಮ್ಮ ‘ಟ್ರುತ್ ಸೋಶಿಯಲ್’ (Truth Social) ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
”ಅವರು ಬಲಿಷ್ಠ, ಆರೋಗ್ಯವಂತ ಮತ್ತು ಬುದ್ಧಿವಂತ ವ್ಯಕ್ತಿಯಾಗಿದ್ದು, ಮುಂಬರುವ ದಿನಗಳಲ್ಲಿ ಇನ್ನೂ ಹಲವು ವರ್ಷಗಳ ಕಾಲ ಶ್ರೇಷ್ಠತೆ ಮತ್ತು ಯಶಸ್ಸನ್ನು ಕಾಣಲಿದ್ದಾರೆ” ಎಂದು ಅವರು ಹೇಳಿದ್ದಾರೆ.






























