ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ

WhatsApp
Telegram
Facebook
Twitter
LinkedIn

ದಾವಣಗೆರೆ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳವು ಸಹಕಾರ ಸಂಘ ಸಂಸ್ಥೆ, ಸಹಕಾರ ಇಲಾಖೆ, ಸಹಕಾರ ಲೆಕ್ಕಪರಿಶೋಧನಾ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಹಾಗೂ ಖಾಸಗಿ ಅಭ್ಯರ್ಥಿಗಳಿಗೆ 6 ತಿಂಗಳು ಅವಧಿಯ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿಯನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯದ ಬೆಂಗಳೂರು, ಮೈಸೂರು, ಮಡಿಕೇರಿ, ಮೂಡಬಿದ್ರೆ, ಶಿವಮೊಗ್ಗ, ಧಾರವಾಡ, ಬೆಳಗಾವಿ ಹಾಗೂ ಕಲರ್ಬುಗಿ ಈ ಸ್ಥಳಗಳಲ್ಲಿ ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿ ಸಂಸ್ಥೆಗಳನ್ನು ನಡೆಸಲಾಗುವುದು. ಈ ತರಬೇತಿ ಜುಲೈ-2026ರ ಮಾಹೆಯಲ್ಲಿ ಪ್ರಾರಂಭಿಸಲಾಗಲಾಗುವುದು. ತರಬೇತಿಗೆ ಅರ್ಜಿ ಸಲ್ಲಿಸಲು ಜೂನ್ 30 ರೊಳಗಾಗಿ ಅರ್ಜಿಯನ್ನು ಭರ್ತಿ ಮಾಡಿ ಆಯಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರಿಗೆ ಸಲ್ಲಿಸಬೇಕು.

ನಿರುದ್ಯೋಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ “6 ತಿಂಗಳು /180 ದಿನಗಳ ವಿಶೇಷ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್” ತರಬೇತಿಯನ್ನು ಸಹ ನೀಡಲಾಗುವುದು. ಈ ವರ್ಗಕ್ಕೆ ಸೇರಿದ ಅಭ್ಯರ್ಥಿಗಳ ಪಟ್ಟಿಯನ್ನು ಆಯಾ ಜಿಲ್ಲಾ ಉದ್ಯೋಗ ವಿನಿಯಮ ಕಚೇರಿಯಿಂದ ತರಿಸಿಕೊಳ್ಳಲಾಗುವುದು ಮತ್ತು ಈ ವರ್ಗದ ಅಭ್ಯರ್ಥಿಗಳು ಆಯಾ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರವರ ಮೂಲಕ ಅಥವಾ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಇವರ ಮೂಲಕ ಅರ್ಜಿಗಳನ್ನು 2026 ರ ಜುಲೈ ಮಾಹೆರೊಳಗಾಗಿ ಸಲ್ಲಿಸಬಹುದು. ಅಭ್ಯರ್ಥಿಗಳು ಕನಿಷ್ಠ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ವಯೋಮಿತಿ 16 ವರ್ಷಗಳಾಗಿರಬೇಕು ಗರಿಷ್ಠ 30 ವರ್ಷಗಳು ಮೀರಿರಬಾರದು. ಸದರಿ ಅಭ್ಯರ್ಥಿಗಳಿಗೆ ಮಾಹೆಯಾನ ರೂ. 600/- ಶಿಷ್ಯವೇತನವನ್ನು ನೀಡಲಾಗುವುದು.

ಡಿ.ಸಿ.ಎಂ ತರಬೇತಿಯ ಅರ್ಜಿಯನ್ನು ಮತ್ತು ವಿವರಣಾ ಪುಸ್ತಕವನ್ನು ದಾವಣಗೆರೆ ಜಿಲ್ಲಾ ಸಹಕಾರ ಒಕ್ಕೂಟ ನಿಯಮಿತ., #2532, “ಕಲಾಪ್ರಕಾಶ ವೃಂದ”, 1ನೇ ಮಹಡಿ, ವಿನೋಬನಗರ 2ನೇ ಮುಖ್ಯರಸ್ತೆ, ಎಂ.ಸಿ.ಸಿ ‘ಎ’ ಬ್ಲಾಕ್, ದಾವಣಗೆರೆ ಈ ಸಂಸ್ಥೆಯಿAದ ಪಡೆಯಬಹುದು. ಅರ್ಜಿ ಮತ್ತು ವಿವರಣಾ ಪುಸ್ತಕದ ಶುಲ್ಕ ರೂ. 100/- (ರೂಪಾಯಿ ಒಂದು ನೂರು ಮಾತ್ರ) ಗಳನ್ನು ನಗದಾಗಿ ಪಾವತಿಸಿ ತರಬೇತಿ ಸಂಸ್ಥೆಯಲ್ಲಿ ಪಡೆಯಬಹುದು. ಅಂಚೆ ಮೂಲಕ ಪಡೆಯಲು ಇಚ್ಚಿಸುವವರು ರೂ. 125/- (ರೂಪಾಯಿ ಒಂದು ನೂರ ಇಪ್ಪತ್ತೆöÊದು ಮಾತ್ರ) ಗಳ ಡಿ.ಡಿ. ಮೂಲಕ ಪಾವತಿಸಿ ಪಡೆಯಬಹುದೆಂದು ಜಿಲ್ಲಾ ಸಹಕಾರ ಒಕ್ಕೂಟ ನಿಯಮಿತದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶೈಲಜಾ ತಿಳಿಸಿದ್ದಾರೆ.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon