ದೆಹಲಿ: ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಕುರಿತು ಅಂತಿಮ ಒಪ್ಪಂದಕ್ಕೆ ಬರಲಾಗಿದೆ. ಒಪ್ಪಂದದ ನಿಯಮಗಳಿಗೆ ಜೂನ್ 19 ರಂದು ಸ್ವಿಟ್ಟರ್ಲೆಂಡ್‌ನಲ್ಲಿ ಎರಡೂ ರಾಷ್ಟ್ರಗಳು ಸಹಿ ಹಾಕಲಿವೆ ಎಂದು ತಿಳಿದುಬಂದಿದೆ.
ಲೆಬನಾನ್‌ನಲ್ಲಿ ನಡೆಯುತ್ತಿರುವ ಮಿಲಿಟರಿ ಕಾರ್ಯಾಚರಣೆಗಳು ಸೇರಿದಂತೆ ಎಲ್ಲಾ ಹಂತಗಳಲ್ಲಿನ ಮಿಲಿಟರಿ ಕ್ರಮಗಳನ್ನು ತಕ್ಷಣವೇ ಮತ್ತು ಶಾಶ್ವತವಾಗಿ ನಿಲ್ಲಿಸಲು ಎರಡೂ ದೇಶಗಳು ನಿರ್ಧರಿಸಿವೆ. ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ಈ ಮಾಹಿತಿಯನ್ನು Xನಲ್ಲಿ ಪೋಸ್ಟ್ ಮಾಡುವ ಮೂಲಕ ಹಂಚಿಕೊಂಡಿದ್ದಾರೆ.






























