ಮೈಸೂರು: ಪಬ್ ವೊಂದರಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಸಜೀವದಹನವಾಗಿರುವ ಘಟನೆ ಮೈಸೂರಿನ ರಿಂಗ್ ರಸ್ತೆಯಲ್ಲಿ ನಡೆದಿದೆ.
ಮೈಸೂರಿನ ರಿಂಗ್ ರಸ್ತೆಯಲ್ಲಿನ ಪಬ್ ವೊಂದರಲ್ಲಿ ಆಕಸ್ಮಿಕ ಅಗ್ನಿ ಅವಘದ ಸಂಭವಿಸಿದೆ. ಬೆಂಕಿ ಅವಘಡದಲ್ಲಿ ಇಬ್ಬರು ಸಜೀವದಹನವಾಗಿದ್ದಾರೆ. ಘಟನೆಯಲ್ಲಿ 7 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಕಿ ಅವಘಡದಿಂದಾಗಿ ಇಡೀ ಪಬ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಅಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.
(ಸಾಂದರ್ಭಿಕ ಚಿತ್ರ)































