ದಾವಣಗೆರೆ; ಹರಿಹರ ನಗರದ ಸಾರ್ವಜನಿಕರಿಗೆ ಅನುಕೂಲವಾಗುವ ಹಿತದೃಷ್ಠಿಯಿಂದ ಹರಿಹರ ನಗರ ವ್ಯಾಪ್ತಿಯ ಹಳೇ ಊರಮ್ಮ ದೇವಸ್ಥಾನದ ಮುಂಭಾಗದಲ್ಲಿ ಪ್ರತಿ ಮಂಗಳವಾರದಂದು ನಡೆಯುವ ವಾರದ ಸಂತೆಯನ್ನು ಎ.ಪಿ.ಎಂ.ಸಿ.ಮುಖ್ಯ ಮಾರುಕಟ್ಟೆ ಪ್ರಾಂಗಣಕ್ಕೆ ತಾತ್ಕಾಲಿಕವಾಗಿ ಸ್ಥಳಾಂತರಿಸಲು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶಿಸಿದ್ದಾರೆ.






























