ಬೆಂಗಳೂರು: ಆರ್ಎಸ್ಎಸ್, ಬಿಜೆಪಿ ಮತ್ತು ಪ್ರಧಾನಿ ಮೋದಿ ದೇಶವನ್ನು ಹಾಳು ಮಾಡುತ್ತಿದ್ದು, ನರೇಂದ್ರ ಮೋದಿ ಅವರಿಗೆ ಶೀಘ್ರ ಸಂಕಷ್ಟ ಎದುರಾಗಲಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಾರದಿದ್ದರೆ ಈ ದೇಶಕ್ಕೆ ಉಳಿಗಾಲವಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಅಲ್ಲದೆ, ಅಯೋಧ್ಯೆ ರಾಮಮಂದಿರದ ಹೆಸರಿನಲ್ಲೂ ಅಕ್ರಮ ಎಸೆಗಲಾಗಿದ್ದು, ಅದರ ಬಗ್ಗೆ ಎಸ್ಐಟಿ ತನಿಖೆ ನಡೆಸಬೇಕು ಎಂದೂ ಅವರು ಆಗ್ರಹಿಸಿದರು.
ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಬಿ.ಕೆ.ಹರಿಪ್ರಸಾದ್ ಅವರ ಕೆಪಿಸಿಸಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ರಾಮನ ಹೆಸರಿನಲ್ಲಿ ಚುನಾವಣೆ ನಡೆಸಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಆದರೀಗ ರಾಮಮಂದಿರದ ಪೂಜಾರಿಯೇ ಹುಂಡಿ ದುಡ್ಡು ಹೊಡೆದಿದ್ದಾರೆ. ರಾಮನ ಹೆಸರಿನಲ್ಲಿ ಕೋಟ್ಯಂತರ ಹಣ ಲೂಟಿ ಮಾಡಲಾಗಿದೆ. ರಾಮಮಂದಿರದ ಹುಂಡಿ ದುಡ್ಡನ್ನು ಬಿಜೆಪಿ ನಾಯಕರ ಶಿಷ್ಯರೇ ಹೊಡೆದಿದ್ದಾರೆಯೇ? ಅಥವಾ ಬೇರೆಯವರೇ ಎಂಬ ಬಗ್ಗೆ ತನಿಖೆಯಾಗಬೇಕು. ಅದಕ್ಕಾಗಿ ಅಲ್ಲಿನ ಸರ್ಕಾರ ಎಸ್ಐಟಿ ರಚನೆ ಮಾಡಬೇಕು ಎಂದು ಒತ್ತಾಯಿಸಿದರು.

































