ಬೆಂ.ಗ್ರಾ ಜಿಲ್ಲೆ,: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ತಜ್ಞ ವೈದ್ಯರು ಹಾಗೂ ಸ್ಪೀಚ್ ಥೆರಪಿಸ್ಟ್ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಗವಾಗಿ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಗೆ ನೇರ ಸಂದರ್ಶನ ಏರ್ಪಡಿಸಲಾಗಿದೆ.
ನ್ಯೂರೊಲಾಜಿಸ್ಟ್, ಮೆಡಿಕಲ್ ಆಫೀಸರ್ ಹಾಗೂ ಸ್ಪೀಚ್ ಥೆರಫಿಸ್ಟ್ ತಲಾ ಒಂದು ಹುದ್ದೆಗಳಿಗೆ ಸಂದರ್ಶನ ಏರ್ಪಡಿಸಲಾಗಿದ್ದು, ಹುದ್ದೆಗೆ ತಕ್ಕ ವಿದ್ಯಾರ್ಹತೆ ಹೊಂದಿರುವ ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ 207, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ಪ್ರತಿ ಶುಕ್ರವಾರ(ರಜಾ ದಿನ ಹೊರತು ಪಡಿಸಿ) ಕಚೇರಿ ಸಮಯದಲ್ಲಿ ಖುದ್ದು ಸಂದರ್ಶನಕ್ಕೆ ಹಾಜರಾಗಬಹುದಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.































