ಬೆಂ.ಗ್ರಾ ಜಿಲ್ಲೆ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಚಿಗುರು, ಯುವ ಸೌರಭ ಹಾಗೂ ಸಾಂಸ್ಕೃತಿಕ ಸೌರಭ ಕಾರ್ಯಕ್ರಮಗಳನ್ನು ಆಯೋಜಿಸಲು ಉದ್ದೇಶಿಸಲಾಗಿದ್ದು, ಅರ್ಹ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ.
ಚಿಗುರು ಕಾರ್ಯಕ್ರಮಕ್ಕೆ 8 ರಿಂದ 14 ವಯಸ್ಸಿನೊಳಗಿನ ಪ್ರತಿಭಾವಂತ ಮಕ್ಕಳು, ಯುವ ಸೌರಭ ಕಾರ್ಯಕ್ರಮಕ್ಕೆ 15ರಿಂದ 30 ವಯಸ್ಸಿನೊಳಗಿನ ಪ್ರತಿಭಾವಂತ ಯುವ ಕಲಾವಿದರು ಹಾಗೂ ಸಾಂಸ್ಕೃತಿಕ ಸೌರಭ ಕಾರ್ಯಕ್ರಮಕ್ಕೆ ಆಕಾಶವಾಣಿ ಬಿ, ಬಿ-ಹೈ ಮತ್ತು ಎ ಗ್ರೇಡ್ ಕಲಾವಿದರು ಹಾಗೂ ಸರ್ಕಾರದಿಂದ ಕೊಡಮಾಡುವ ಪ್ರಶಸ್ತಿ ಪುರಸ್ಕೃತ ಕಲಾವಿದರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತ ಕಲಾವಿದರು ಜುಲೈ 03 ರೊಳಗೆ ಸೂಕ್ತ ದಾಖಲೆಗಳೊಂದಿಗೆ ಅರ್ಜಿಯನ್ನು ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕೊಠಡಿ ಸಂಖ್ಯೆ:118, ಜಿಲ್ಲಾಡಳಿತ ಭವನ, ಚಪ್ಪರದಕಲ್ಲು, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿಗೆ ಖುದ್ದಾಗಿ ಸಲ್ಲಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.































