ಬಳ್ಳಾರಿ: ಪಿಯುಸಿ ಅಥವಾ ಯಾವುದೇ ಪದವಿ ಉತ್ತೀರ್ಣರಾದವರು ನೇರ ಸಂದರ್ಶನ

WhatsApp
Telegram
Facebook
Twitter
LinkedIn

ಬಳ್ಳಾರಿ: ಪಿಯುಸಿ ಅಥವಾ ಯಾವುದೇ ಪದವಿ ಉತ್ತೀರ್ಣರಾದವರು ನೇರ ಸಂದರ್ಶನ

ಬಳ್ಳಾರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸಹಯೋಗದೊಂದಿಗೆ ಭರತ್ ಫೈನಾನ್ಷಿಯಲ್ ಇನ್‌ಕ್ಲೂಷನ್ ಲಿಮಿಟೆಡ್ ಸಂಸ್ಥೆಯು ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ಜೂನ್ 25 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ನೇರ ಸಂದರ್ಶನವನ್ನು ಆಯೋಜಿಸಿದೆ.

ಈ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ರೀತಿಯ ಶುಲ್ಕ ಇರುವುದಿಲ್ಲ ಹಾಗೂ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿ ಇಬ್ಬರಿಗೂ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.

ಸಂದರ್ಶನ ನಡೆಯುವ ಸ್ಥಳ:

ಭರತ್ ಫೈನಾನ್ಷಿಯಲ್ ಇನ್‌ಕ್ಲೂಷನ್ ಲಿಮಿಟೆಡ್, ಮನೆ ನಂ. 75, ವಾರ್ಡ್ ನಂ. 33, ಸಂಜಯ ಗಾಂಧಿ ನಗರ,  ಇನ್‌ಫಾಂಟ್ರಿ ರಸ್ತೆ, ಅಗ್ನಿಶಾಮಕ ಠಾಣೆ ಹತ್ತಿರ, ಬಳ್ಳಾರಿ.

ವಿದ್ಯಾರ್ಹತೆ ಪಿಯುಸಿ ಅಥವಾ ಯಾವುದೇ ಪದವಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳಿಗೆ ದ್ವಿಚಕ್ರ ವಾಹನ ಇರುವುದು ಕಡ್ಡಾಯವಾಗಿದೆ.

ಸಂದರ್ಶನದಲ್ಲಿ ಭಾಗವಹಿಸಲು ಇಚ್ಛಿಸುವ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಪ್ರತಿ ಮತ್ತು ಸ್ವ-ವಿವರ ಪ್ರತಿಯೊಂದಿಗೆ ನಿಗದಿತ ಸಮಯಕ್ಕೆ ಸಂದರ್ಶನ ಸ್ಥಳದಲ್ಲಿ ಹಾಜರಿರಬೇಕು.

ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ.7619207762, 9663263086, 7676774293, 6360408094 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon