ಚಿತ್ರದುರ್ಗ : ಶಾಸಕ ಕೆ.ಸಿ.ವೀರೇಂದ್ರಪಪ್ಪಿರವರ ಜನ್ಮದಿನವನ್ನು ನಗರದ ವಿವಿದೆಡೆ ಮಂಗಳವಾರ ಸಹಸ್ರಾರು ಅಭಿಮಾನಿಗಳು, ವಿವಿಧ ಸಂಘ ಸಂಸ್ಥೆಗಳವರು ವಿಜೃಂಭಣೆಯಿಂದ ಆಚರಿಸಿದರು.
ಚಳ್ಳಕೆರೆ ಟೋಲ್ಗೇಟ್ನಲ್ಲಿ ಕೆಸಿವಿ. ಪ್ರಕೃತಿ ಸಂರಕ್ಷಣಾ ವೇದಿಕೆ ಉದ್ಘಾಟಿಸಿ ನೆರೆದಿದ್ದವರಿಗೆ ಸಸಿಗಳನ್ನು ವಿತರಿಸಿ ನಂತರ ನಗರಸಭೆ ಪೌರ ಕಾರ್ಮಿಕರನ್ನು ಸನ್ಮಾನಿಸಿ ಮಾತನಾಡಿದ ಶಾಸಕ ಕೆ.ಸಿ.ವೀರೇಂದ್ರಪಪ್ಪಿರವರು ಕೇಕ್ ಕತ್ತರಿಸಿ ಅದ್ದೂರಿಯಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವ ಬದಲು ಸಮಾಜಮುಖಿ ಕಾರ್ಯಗಳೊಂದಿಗೆ ಜನ್ಮದಿನ ಆಚರಿಸಿಕೊಳ್ಳುವುದು ಅರ್ಥಪೂರ್ಣ. ಪ್ರತಿಯೊಬ್ಬರು ಒಂದೊಂದು ಸಸಿ ನೆಟ್ಟು ದೊಡ್ಡ ಮರವನ್ನಾಗಿ ಬೆಳೆಸಿದರೆ ಸಕಲ ಜೀವರಾಶಿಗಳಿಗೆ ಉಸಿರಾಡಲು ಶುದ್ದವಾದ ಗಾಳಿ ಸಿಗುತ್ತದೆಯಲ್ಲದೆ ಮುಂದಿನ ಪೀಳಿಗೆಗೆ ಹಸಿರು ಪರಿಸರವನ್ನು ಕೊಡುಗೆಯಾಗಿ ನೀಡಬಹುದು ಎಂದು ಹೇಳಿದರು.
ಪ್ರತಿನಿತ್ಯವೂ ಚಳಿ, ಮಳೆ, ಗಾಳಿಯನ್ನು ಲೆಕ್ಕಿಸದೆ ನಗರ ಸ್ವಚ್ಚತೆಯಲ್ಲಿ ತೊಡಗುವ ಪೌರ ಕಾರ್ಮಿಕರನ್ನು ಗೌರವದಿಂದ ಕಾಣಬೇಕು. ಒಂದು ದಿನ ಅವರುಗಳು ಕೆಲಸ ಸ್ಥಗಿತಗೊಳಿಸಿದರೆ ಸಾರ್ವಜನಿಕರು ಪರದಾಡಬೇಕಾಗುತ್ತದೆ. ಈ ನಿಟ್ಟಿನಲ್ಲಿ ಪೌರ ಕಾರ್ಮಿಕರ ಕಾಯಕ ಅತ್ಯಂತ ಮಹತ್ವದ್ದು ಎಂದು ಪ್ರಶಂಶಿಸಿದರು.
ನಗರಸಭೆ ಮಾಜಿ ಅಧ್ಯಕ್ಷರುಗಳಾದ ಸಿ.ಟಿ.ಕೃಷ್ಣಮೂರ್ತಿ, ಹೆಚ್.ಸಿ.ನಿರಂಜನಮೂರ್ತಿ, ಮಂಜುನಾಥಗೊಪ್ಪೆ, ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ
ಆರ್.ಕೆ.ಸರ್ದಾರ್, ಸೂರಪ್ಪ, ನಗರಾಭಿವೃದ್ದಿ ಪ್ರಾಧಿಕಾರದ ಸದಸ್ಯರುಗಳಾದ ಹೆಚ್.ಅಂಜಿನಪ್ಪ, ಸುರೇಶ್, ಸೈಟ್ ಬಾಬಣ್ಣ, ಕೆಪಿಸಿಸಿ. ಮಹಿಳಾ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಮುನಿರಾ ಎ.ಮಕಾಂದಾರ್, ಉಪ ವಿಭಾಗಾಧಿಕಾರಿ ಕಾಂತರಾಜು, ಸಮಾಜ ಕಲ್ಯಾಣ ಇಲಾಖೆಯ ಪರಮೇಶ್ವರಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಹಾಂತೇಶ್, ಶಿಕ್ಷಕಿ ಬಿ.ಟಿ.ಲೋಲಾಕ್ಷಮ್ಮ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಾಲತೇಶ್ ಮುದ್ದಜ್ಜಿ ಇನ್ನು ಅನೇಕರು ಜನ್ಮದಿನಾಚರಣೆಯಲ್ಲಿ ಪಾಲ್ಗೊಂಡು ಕೆ.ಸಿ.ವೀರೇಂದ್ರಪಪ್ಪಿರವರಿಗೆ ಶುಭ ಕೋರಿದರು.
ಚಿತ್ರದುರ್ಗದಲ್ಲಿ ಹದಿನೈದು ಸಾವಿರ ಸಸಿಗಳನ್ನು ನೆಟ್ಟಿರುವ ಟಾರ್ಗೆಟ್ ಟೆನ್ ಥೌಸೆಂಡ್ನ ಸಿದ್ದರಾಜು ಮತ್ತು ತಂಡದವರನ್ನು ಸನ್ಮಾನಿಸಲಾಯಿತು.
ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಶಾಲೆಯ ಮಕ್ಕಳಿಗೆ ಶಾಸಕ ಕೆ.ಸಿ.ವೀರೇಂದ್ರಪಪ್ಪಿರವರು ನೋಟ್ಬುಕ್ಗಳನ್ನು ವಿತರಿಸಿದರು.

































