ಬೆಂಗಳೂರು; ಧಾರಾಕಾರ ಮಳೆಯ ಹಿನ್ನೆಲೆ ನಾಳೆ ದ.ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಆದೇಶಿಸಿದ್ದಾರೆ.
ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ, ಪ್ರೌಢಶಾಲೆ, ಸರ್ಕಾರಿ ಅನುದಾನಿತ, ಖಾಸಗಿ ಶಾಲೆಗಳು & ಪದವಿ ಪೂರ್ವ ಕಾಲೇಜಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ನಾಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯಲಿದ್ದು, ಗಾಳಿಯ ವೇಗ ಗಂಟೆಗೆ ಸುಮಾರು 30-40 KM ಇರಲಿದೆ ಎಂದು IMD ಈ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದೆ.
































