ದಾವಣಗೆರೆ : ಭದ್ರಾ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಪ್ರಸ್ತುತ ಮಳೆ ಕೊರತೆಯಿಂದಾಗಿ ಭದ್ರಾ ಜಲಾಶಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಸಂಗ್ರಹವಾಗಿರುವುದಿಲ್ಲ.
ಆದಕಾರಣ ಮುಂಗಾರು ಹಂಗಾಮಿನ ಬೆಳೆಗಳಿಗೆ ಬಲದಂಡೆ ಮತ್ತು ಎಡದಂಡೆ ನಾಲೆಯಲ್ಲಿ ನೀರು ಹರಿಸಲು ಸಾಧ್ಯವಾಗುದಿಲ್ಲವೆಂದು ಮತ್ತು ಜಲಾಶಯದಲ್ಲಿ ಸಂಗ್ರಹವಾಗಿರುವ ನೀರನ್ನು ಕುಡಿಯಲು ಮಾತ್ರ ಬಳಸಲು ಸರ್ಕಾರದ ಆದೇಶವಾಗಿರುವ ಹಿನ್ನಲೆಯಲ್ಲಿ ಅಚ್ಚುಕಟ್ಟು ಭಾಗದ ಎಲ್ಲಾ ರೈತರು ಇಲಾಖೆಯೊಂದಿಗೆ ಸಹಕರಿಸಬೇಕೆಂದು ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.
































