ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ವಿದ್ಯಾರ್ಥಿಗಳ ಸುರಕ್ಷತೆಗಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಶಿವಮೊಗ್ಗದ ತೀರ್ಥಹಳ್ಳಿ, ಹೊಸನಗರ ಹಾಗೂ ಸಾಗರ ತಾಲೂಕಿನ ಎಲ್ಲಾ ಶಾಲಾ , ಕಾಲೇಜುಗಳಿಗೆ ಇಂದು ರಜೆ ನೀಡಲಾಗಿದೆ.
ಉ. ಕನ್ನಡದ ಶಿರಸಿ, ಸಿದ್ದಾಪುರ, ಜೋಯಿಡಾ, ದಾಂಡೇಲಿ , ಯಲ್ಲಾಪುರ ತಾಲೂಕಿನ ಅಂಗನವಾಡಿ, ಪ್ರಾಥಮಿಕ & ಪ್ರೌಢಶಾಲೆಗಳಿಗೆ ಹಾಗೂ ಹಾಸನದ ಸಕಲೇಶಪುರ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ & ಕಾಲೇಜುಗಳಿಗೆ ರಜೆ ನೀಡಲಾಗಿದೆ.

































