ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ದಾವಣಗೆರೆ ಇವರ ವತಿಯಿಂದ ಜುಲೈ 15 ರಂದು ಬೆಳಿಗ್ಗೆ 10 ಗಂಟೆಗೆ ವಿಶ್ವ ಕೌಶಲ್ಯ ದಿನದ ಪ್ರಯುಕ್ತ ಉದ್ಯೋಗಮೇಳವನ್ನು ಆಯೋಜಿಸಲಾಗಿದೆ.
ಈ ಉದ್ಯೋಗಮೇಳದಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಎಸ್ಎಸ್ಎಲ್ಸಿ, ಐ.ಟಿ.ಐ, ಡಿಪ್ಲೋಮಾ, ಪಿಯುಸಿ, ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಆಸಕ್ತ ಅಭ್ಯರ್ಥಿಗಳು ಕನಿಷ್ಠ 05 ಬಯೋಡಾಟಾ ಮತ್ತು ಆಧಾರ್ ನಂಬರ್ ನೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, ಡಿಸಿ ಆಫೀಸ್, ದಾವಣಗೆರೆ ಇಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ ದೂ.ಸಂ: 8105122556, ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ವಿಶ್ವ ಕೌಶಲ್ಯ ದಿನದ ಪ್ರಯುಕ್ತ ಉದ್ಯೋಗ ಮೇಳ
(AI ಚಿತ್ರ)

































