ಬೆಂಗಳೂರು: ಬೆಂಗಳೂರಿನ 48ನೇ ಎಸಿಎಂಎಂ ನ್ಯಾಯಾಲಯ ಪ್ರಕಾಶ್ ರಾಜ್ ಗೆ ಜಾಮೀನು ಮಂಜೂರು ಮಾಡಿದೆ. ದಿಲೀಪ್ ರಾಜ್ ಎಂಬುವವರು ನಟ ಪ್ರಕಾಶ್ ರಾಜ್ ವಿರುದ್ಧ 4 ವೋಟರ್ ಐಡಿ ಹೊಂದಿರುವ ಆರೋಪ ಮಾಡಿ ಕೇಸ್ ದಾಖಲಿಸಿದ್ದರು. ಪಿಸಿಆರ್ ವಿಚಾರಣೆ ನಡೆಸಿದ್ದ ನ್ಯಾಯಾಲಯ ಕ್ರಿಮಿನಲ್ ಕೇಸ್ ದಾಖಲಿಸಿತ್ತು. ವಿಚಾರಣೆಗೆ ಕೋರ್ಟ್ ಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿತ್ತು.
ನಾಲ್ಕು ವೋಟರ್ ಐಡಿ ಹೊಂದಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಲಾಯ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಆದರೆ ಪ್ರಕಾಶ್ ರಾಜ್ ಕೋರ್ಟ್ ಗೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ವಾರಂಟ್ ಜಾರಿ ಮಾಡಲಾಗಿತ್ತು. ವಾರಂಟ್ ಜಾರಿಯಾದ ಹಿನ್ನೆಲೆಯಲ್ಲಿ ಪ್ರಕಾಶ್ ರಾಜ್ ಇಂದು ಕೋರ್ಟ್ ಗೆ ಹಾಜರಾಗಿದ್ದರು. ವಿಚಾರಣೆ ಬಳಿಕ ನ್ಯಾಯಾಲಯ ಪ್ರಕಾಶ್ ರಾಜ್ ಅವರಿಗೆ 4 ಸಾವಿರ ರೂ ನಗದು ಶ್ಯೂರಿಟಿ ನೀಡುವಂತೆ ಷರತ್ತು ವಿಧಿಸಿ, ಜಾಮೀನು ಮಂಜೂರು ಮಾಡಿದೆ. ಈ ಹಿನ್ನೆಲೆಯಲ್ಲಿ ಬಿಗ್ ರಿಲೀಫ್ ಸಿಕ್ಕಂತಾಗಿದೆ.

































