ಬೆಂಗಳೂರು: ಬೆಂಗಳೂರಿನಲ್ಲಿ ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶ್ವೇತಾ(25) ಆತ್ಮಹತ್ಯೆ ಮಾಡಿಕೊಂಡು ಎಂದು ಹೇಳಲಾಗಿದೆ.
ಮನೆಯಲ್ಲಿ ಫ್ಯಾನ್ ಗೆ ನೇಣು ಬಿಗಿದುಕೊಂಡು ಶ್ವೇತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಂಕದಕಟ್ಟೆಯಲ್ಲಿ ಘಟನೆ ನಡೆದಿದೆ. ನವ ವಿವಾಹಿತೆ ಶ್ವೇತಾ ನೇಣಿಗೆ ಶರಣಾಗಿದ್ದಾರೆ. ಕಳೆದ ನಾಲ್ಕು ತಿಂಗಳ ಹಿಂದೆ ಶ್ವೇತಾ ಪ್ರೇಮ ವಿವಾಹವಾಗಿದ್ದರು. ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ

































