ಪಾಲಿಟೆಕ್ನಿಕ್ ಅತಿಥಿ ಉಪನ್ಯಾಸಕರ ಆಯ್ಕೆಗೆ ಅರ್ಜಿ ಆಹ್ವಾನ

WhatsApp
Telegram
Facebook
Twitter
LinkedIn

ಚಿತ್ರದುರ್ಗ: ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಚಿತ್ರದುರ್ಗದ ಜಿಲ್ಲಾ ಪಂಚಾಯತ್ ರಸ್ತೆಯಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುನಲ್ಲಿ 2026-27ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರನ್ನು ಆನ್‍ಲೈನ್ ಕೌನ್ಸೆಲಿಂಗ್ ಮೂಲಕ ಆಯ್ಕೆ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದೆ.

ಪ್ರಸಕ್ತ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಬೋಧನಾ ಕಾರ್ಯಭಾರವನ್ನು ಹಂಚಿಕೆ ಮಾಡಿದ ನಂತರ ಉಳಿಕೆಯಾಗಿರುವ ಬೋಧನಾ ಕಾರ್ಯಭಾರಕ್ಕೆ ಅನುಗುಣವಾಗಿ ಈ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಗುತ್ತಿದೆ.

ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜುಲೈ 15 ರಿಂದ ಪ್ರಾರಂಭವಾಗಿದ್ದು, ಜುಲೈ 21 ಅರ್ಜಿ ಸಲ್ಲಿಸಲು ಅಥವಾ ಈಗಾಗಲೇ ಸಲ್ಲಿಸಿರುವ ಅರ್ಜಿಗಳನ್ನು ತಿದ್ದುಪಡಿ ಮಾಡಲು ಕೊನೆಯ ದಿನಾಂಕವಾಗಿದೆ. ಜುಲೈ 24 ರಂದು ತಾತ್ಕಾಲಿಕ ಮೆರಿಟ್ ಪಟ್ಟಿಯನ್ನು ಪ್ರಕಟಿಸಲಾಗುವುದು. ಜುಲೈ 28 ರಂದು ಲಭ್ಯವಿರುವ ಒಟ್ಟು ಬೋಧನಾ ಕಾರ್ಯಭಾರದ ವಿವರಗಳನ್ನು ಅಧಿಕೃತವಾಗಿ ಪ್ರಕಟಿಸಲಾಗುವುದು.

ಮೆರಿಟ್ ಪಟ್ಟಿಯ ಅನ್ವಯ ಸಂಸ್ಥೆಗಳ ಆಯ್ಕೆಗಾಗಿ ಜುಲೈ 29 ರಿಂದ ಜುಲೈ 31, ರವರೆಗೆ ಆನ್‍ಲೈನ್ ಕೌನ್ಸೆಲಿಂಗ್ ಪ್ರಕ್ರಿಯೆ ನಡೆಯಲಿದೆ. ಕೌನ್ಸೆಲಿಂಗ್‍ನಲ್ಲಿ ಭಾಗವಹಿಸಿ ಯಶಸ್ವಿಯಾಗಿ ಸಂಸ್ಥೆಗಳನ್ನು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಜುಲೈ 31 ರಂದು ಪ್ರಕಟಿಸಲಾಗುವುದು.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯವಿರುವ ಎಲ್ಲಾ ಮೂಲ ದಾಖಲಾತಿಗಳೊಂದಿಗೆ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಗೆ ಖುದ್ದಾಗಿ ಭೇಟಿ ನೀಡಿ ವೆಬ್ ಪೆÇೀರ್ಟಲ್‍ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.

 

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon