ಮಧ್ಯಪ್ರದೇಶ: 10 ವರ್ಷದ ಬಾಲಕನೊಬ್ಬ 140 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಘಟನೆ ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ನಡೆದಿದೆ.
ಕೊಳವೆ ಬಾವಿಯಲ್ಲಿ ಬಿದ್ದಿರುವ ಬಾಲಕ 39 ಅಡಿ ಆಳದಲ್ಲಿ ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯಾಚಣೆ ನಡೆದಿದೆ. ಎಸ್ ಡಿ ಆರ್ ಎಫ್, ಎನ್ ಡಿ ಆರ್ ಎಫ್ ಹಾಗೂ ಸ್ಥಳೀಯ ಪೊಲೀಸರು ಸ್ಥಳದಲ್ಲಿ ಬೀಡುಬಿಟ್ಟಿದ್ದು, ರಕ್ಷಣಾಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ.
40 ಅಡಿ ಆಳದಲ್ಲಿ ಹೊಂಡವನ್ನು ಕೊರೆದು ಬಾಲಕನ ರಕ್ಷಿಸಲು ಯತ್ನಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸತ್ಯೇಂದ್ರ ಸಿಂಗ್ ತಿಳಿಸಿದ್ದಾರೆ.