ನವದೆಹಲಿ : ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ 10 ನೇ ತರಗತಿಯ ವಿದ್ಯಾರ್ಥಿಯೊಬ್ಬನನ್ನು ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ವಿದ್ಯಾರ್ಥಿಯನ್ನು 16 ವರ್ಷದ ನಿಖಿಲ್ ಎಂದು ಗುರುತಿಸಲಾಗಿದೆ.
ಬನ್ಸುರಿ ಗ್ರಾಮದಲ್ಲಿ ನಿಖಿಲ್ ಮೇಲೆ ಅಪರಿಚಿತರು ಮೂರು ಬಾರಿ ಗುಂಡು ಹಾರಿಸಿದ್ದು, ಗುಂಡೇಟಿನಿಂದಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೊಲೆಯ ಹಿಂದಿನ ಉದ್ದೇಶ ದ್ವೇಷವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಬಾಲಕನ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.