ರಾಜಸ್ಥಾನ: ಹೌದು ಶಾಲೆಗೆ ಹೋಗುತ್ತಿದ್ದ 15 ವರ್ಷದ ಬಾಲಕಿಯನ್ನು ಕಾರಿನಲ್ಲಿ ಅಪಹರಿಸಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಅಲ್ವಾರ್ ನಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು ರಾಹುಲ್ ಸೈನಿ (23) ಎಂದು ಗುರುತಿಸಲಾಗಿದೆ. ಆರೋಪಿ ಮೊಬೈಲ್ ನಲ್ಲಿದ್ದ ಅಶ್ಲೀಲ ವಿಡಿಯೋಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಮೊಬೈಲ್ ನಲ್ಲಿ ಹಲವು ಯುವತಿಯರ ಅಶ್ಲಿಲ ವಿಡಿಯೋಗಳು ಪತ್ತೆಯಾಗಿವೆ. ಪ್ರಕರಣ ಸಂಬಂಧ ಉಳಿದ ಇಬ್ಬರು ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

































