ರೈತರ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಮೂಲಕ ನೈಸರ್ಗಿಕ ಕೃಷಿಗೆ ಉತ್ತೇಜನ ನೀಡಲು ಮುಂದಾಗಿದೆ.
ಹೌದು, ಈ ಯೋಜನೆ ಮೂಲಕ ನೈಸರ್ಗಿಕ ಕೃಷಿ ಮಾಡುವ ರೈತರಿಗೆ ಪ್ರತಿ ಹೆಕ್ಟೇರ್‌ಗೆ 15ರಿಂದ 20 ಸಾವಿರ ರೂ.ವರೆಗೆ ಪ್ರೋತ್ಸಾಹಧನ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಈ ಯೋಜನೆಗೆ ಈಗಾಗಲೇ ಸರ್ಕಾರ ಅಂದಾಜು 2500 ಕೋಟಿ ರೂಪಾಯಿ ವೆಚ್ಚವನ್ನು ಮೀಸಲಿಟ್ಟಿದೆ. ಈ ಯೋಜನೆಯ ಉಪಯೋಗವನ್ನು ಸುಮಾರು 15,000 ಹಳ್ಳಿಗಳ 1 ಕೋಟಿ ರೈತರು ಪಡೆಯಲಿದ್ದಾರೆ ಎಂದು ಕೇಂದ್ರ ಸರ್ಕಾರ ಲೆಕ್ಕಹಾಕಿದೆ.