ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಭೀಕರ ಅಪಘಾತ ನೀಡಿದ್ದು, ಕಾರು ಮತ್ತು ಐರಾವತ ಬಸ್ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಕೊನೆಯುಸಿರೆಳೆದ ಘಟನೆ ಗುರುವಾರ (ಎ.03) ನಡೆದಿದೆ.
ಮಂಡ್ಯ ತಾಲ್ಲೂಕು ತೂಬಿನಕೆರೆ ಎಕ್ಸಿಟ್ ಬಳಿ ಘಟನೆ ನಡೆದಿದ್ದು, ಇಬ್ಬರು ಮಹಿಳೆಯರು, ಇಬ್ಬರು ಪುರುಷರು ಸಾವನ್ನಪ್ಪಿದ್ದಾರೆ.
ಎಕ್ಸ್ಪ್ರೆಸ್ ವೇ ನಿಂದ ಎಕ್ಸಿಟ್ ಆಗುವಾಗ ಕಾರು ಚಾಲಕನಿಗೆ ಗೊಂದಲವಾಗಿ ಮತ್ತೆ ಎಕ್ಸ್ಪ್ರೆಸ್ ವೇಗೆ ಕಾರು ತಿರುಗಿಸಿದ್ದಾರೆ. ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಕೆಎಸ್ಆರ್ಟಿಸಿ ಐರಾವತ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದವರ ಗುರುತು ಪತ್ತೆಯಾಗಿಲ್ಲ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.