ನವದೆಹಲಿ : 2020 ರ ದೆಹಲಿ ಗಲಭೆಯಲ್ಲಿ ಕ್ಯಾಬಿನೆಟ್ ಸಚಿವ ಕಪಿಲ್ ಮಿಶ್ರಾ ಮತ್ತು ಇತರರ ಪಾತ್ರದ ಬಗ್ಗೆ ತನಿಖೆ ನಡೆಸಲು ದೆಹಲಿ ನ್ಯಾಯಾಲಯ ಮಂಗಳವಾರ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲು ಆದೇಶಿಸಿದೆ.
“ಆಪಾದಿತ ಅಪರಾಧ ನಡೆದ ಸಮಯದಲ್ಲಿ ಮಿಶ್ರಾ ಆ ಪ್ರದೇಶದಲ್ಲಿದ್ದರು ಎಂಬುದು ಸ್ಪಷ್ಟವಾಗಿದೆ. ಹೆಚ್ಚಿನ ತನಿಖೆ ಅಗತ್ಯವಿದೆ” ಎಂದು ನ್ಯಾಯಾಧೀಶರು ಹೇಳಿದರು.
ಯಮುನಾ ವಿಹಾರ್ ನಿವಾಸಿ ಮೊಹಮ್ಮದ್ ಇಲ್ಯಾಸ್ ಅವರು ಎಫ್‌ಐಆರ್ ದಾಖಲಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಧೀಶರು ನಡೆಸುತ್ತಿದ್ದರು. ಗಲಭೆಯಲ್ಲಿ ಮಿಶ್ರಾ ಅವರ ಪಾತ್ರವಿಲ್ಲ ಎಂದು ದೆಹಲಿ ಪೊಲೀಸರು ಆರೋಪಿಸಿ ಎಫ್‌ಐಆರ್ ದಾಖಲಿಸಲು ನಿರಾಕರಿಸಿದ್ದರು.