ನವದೆಹಲಿ: ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಆರ್ಥಿಕ ಸಮೀಕ್ಷೆಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಜನವರಿ 7ರಂದು ವಿಚಾರಣೆಗೆ ಹಾಜರಾಗುವಂತೆ ಉತ್ತರ ಪ್ರದೇಶದ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ಅಖಿಲ ಭಾರತ ಹಿಂದೂ ಮಹಾಸಂಘದ ಅಧ್ಯಕ್ಷ ಪಂಕಜ್ ಪಾಠಕ್ ಸಲ್ಲಿಸಿದ್ದ ಅರ್ಜಿಯ ಮೇರೆಗೆ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಸುಧೀರ್ ಕುಮಾರ್ ಅವರು ಸಮನ್ಸ್ ಜಾರಿಗೊಳಿಸಿದ್ದಾರೆ. ಜನವರಿ 7 ರಂದು ಕೋರ್ಟ್ ಮುಂದೆ ಹಾಜರಾಗುವಂತೆ ರಾಹುಲ್ ಗಾಂಧಿಗೆ ಸೂಚಿಸಲಾಗಿದೆ.
ಪಾಠಕ್ ಪರ ವಕೀಲರಾದ ವೀರೇಂದ್ರ ಪಾಲ್ ಗುಪ್ತಾ ಪ್ರತಿಕ್ರಿಯೆ ನೀಡಿ, ರಾಹುಲ್ ಗಾಂಧಿ ಬಡ ವರ್ಗಗಳನ್ನು ಪ್ರಚೋದಿಸಲು ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಗಳು ರಾಜಕೀಯ ಲಾಭಕ್ಕಾಗಿ ವರ್ಗ ದ್ವೇಷವನ್ನು ಸೃಷ್ಟಿಸುವ ಗುರಿಯನ್ನು ಹೊಂದಿವೆ. ತನ್ನ ವೈಯಕ್ತಿಕ ಹಿತಾಸಕ್ತಿಗಾಗಿ ಉದ್ದೇಶಪೂರ್ವಕವಾಗಿ ಆರ್ಥಿಕವಾಗಿ ದುರ್ಬಲ ವರ್ಗಗಳ ನಡುವೆ ಹಗೆತನ ಮತ್ತು ದ್ವೇಷವನ್ನು ಬಿತ್ತಲು ಕಾಂಗ್ರೆಸ್ ಪ್ರಯತ್ನಿಸಿದೆ ಎಂದು ಆರೋಪಿಸಿದ್ದಾರೆ.