ಚಿಕಾಗೋ : ಯುನೈಟೆಡ್ ಏರ್‌ಲೈನ್ಸ್ ಜೆಟ್‌ಲೈನರ್ ವಿಮಾನದ ಚಕ್ರದಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.
ಮಂಗಳವಾರ ಮಧ್ಯಾಹ್ನ ಚಿಕಾಗೋ ಓ’ಹೇರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಯುನೈಟೆಡ್ ಫ್ಲೈಟ್ 202 ಕಹುಲುಯಿ ವಿಮಾನ ನಿಲ್ದಾಣದಲ್ಲಿ ಇಳಿದಾಗ ವಿಮಾನದ ಲ್ಯಾಂಡಿಂಗ್ ಗೇರ್ ಹೊಂದಿರುವ ಕಂಪಾರ್ಟ್‌ಮೆಂಟ್‌ಗಳಲ್ಲಿ ಶವ ಪತ್ತೆಯಾಗಿದೆ ಎಂದು ಏರ್‌ಲೈನ್‌ನ ವೆಬ್‌ಸೈಟ್ ತಿಳಿಸಿದೆ.
ಮೃತ ವ್ಯಕ್ತಿಯ ಬಗ್ಗೆ ತನಿಖೆ ನಡೆಯುತ್ತಿದೆ. ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆಗಳು ಸಾಮಾನ್ಯವಾಗಿವೆ ಮತ್ತು ಘಟನೆಯಿಂದ ಏನೂ ಪರಿಣಾಮ ಬೀರಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಿಂದೆಯೂ ಲ್ಯಾಂಡಿಂಗ್ ಗೇರ್ ವಿಭಾಗದಲ್ಲಿ ಪ್ರಯಾಣಿಸಲು ಪ್ರಯತ್ನಿಸಿದ ಕಾರಣ ಕಳೆದ ಕೆಲವು ವರ್ಷಗಳಲ್ಲಿ ಅನೇಕ ಜನರು ಸಾವನ್ನಪ್ಪಿದ್ದಾರೆ.