ಪುಣೆ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಹಾಗೂ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಯ ಮುಖ್ಯಸ್ಥ ಅಜಿತ್ ಪವಾರ್ ಅವರ ಪಾರ್ಥಿವ ಶರೀರವನ್ನು ಕಟೇವಾಡಿಯಲ್ಲಿರುವ ಅವರ ನಿವಾಸದಿಂದ ಅಂತ್ಯಕ್ರಿಯೆಗಾಗಿ ಬಾರಾಮತಿಯ ವಿದ್ಯಾ ಪ್ರತಿಷ್ಠಾನ ಮೈದಾನಕ್ಕೆ ಕೊಂಡೊಯ್ಯಲಾಯಿತು. ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು. ರಸ್ತೆಯುದ್ದಕ್ಕೂ ಪಕ್ಷದ ಕಾರ್ಯಕರ್ತರು ಮತ್ತು ಸಾರ್ವಜನಿಕರು ಅಂತಿಮ ನಮನ ಸಲ್ಲಿಸಿದರು.
ಬುಧವಾರ (ಜ.28) ವಿಮಾನ ಅಪಘಾತದಲ್ಲಿ ನಿಧನರಾದ ಅಜಿತ್ ಪವಾರ್ ಅವರ ಅಗಲಿಕೆಗೆ ರಾಜಕೀಯ ವಲಯದಲ್ಲಿ ಆಳವಾದ ಶೋಕ ವ್ಯಕ್ತವಾಗಿದೆ.

































