ಚಿಕ್ಕಮಗಳೂರು: ಬಂಧನಕ್ಕೊಳಗಾಗಿ ಬಿಡುಗಡೆಗೊಂಡ ಬಳಿಕ ಜಿಲ್ಲೆಗೆ ಆಗಮಿಸಿದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರಿಗೆ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ಸ್ವಾಗತ ಕೋರಿದರು.
ಸಿ.ಟಿ.ರವಿ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕಾರ್ ಅವರ ವಿರುದ್ಧ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪದ ಹಿನ್ನಲೆಯಲ್ಲಿ ಬಂಧನಕ್ಕೊಳಗಾಗಿದ್ದರು. ತಾಲೂಕಿನ ಮಾಗಡಿ ಹ್ಯಾಂಡ್ ಪೋಸ್ಟ್ ಬಳಿ ಪಟಾಕಿ ಸಿಡಿಸಿ ಹೂವಿನ ಹಾರ ಹಾಕಿ ಸ್ವಾಗತ ಕೋರಿ ಕಾರ್ಯಕರ್ತರು ಸಂಭ್ರಮಿಸಿದರು. ಅಲ್ಲಿಂದ ನೆರವಾಗಿ ವಾಹನಗಳ ಮೂಲಕ ಆಜಾದ್ ಪಾರ್ಕ್ ನಲ್ಲಿ ಜೆಸಿಬಿ ಮೂಲಕ ಪುಷ್ಪಾರ್ಚನೆ ಮಾಡಿ ಜೈಕಾರ ಹಾಕಿ ಸಂಭ್ರಮಿಸಿದರು. ನಂತರ ಆಜಾದ್ ಪಾರ್ಕ್ ಮೂಲಕ ಎಂ.ಜಿ.ರಸ್ತೆಯಲ್ಲಿ ಮೆರವಣಿಗೆ ನಡೆಸಿದರು. ಹನುಮಂತಪ್ಪ ವೃತ್ತದಲ್ಲಿ ಬೃಹತ್ ಹೂವಿನ ಹಾರ ಹಾಕಿ ಸಂಭ್ರಮಿಸಿದರು.
ಸಿ.ಟಿ.ರವಿ ಅವರ ಆಗಮನದ ಹಿನ್ನಲೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಬೀಗಿ ಪೋಲಿಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.ನಗರದಲ್ಲಿರುವ ತಮ್ಮ ನಿವಾಸಕ್ಕೆ ಆಗಮನದ ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ಇಲಾಖೆಯಿಂದ ಜಿಲ್ಲೆಯ ಕಡೂರು, ತರೀಕೆರೆ, ಕೊಪ್ಪ, ನರಸಿಂಹರಾಜಪುರ ಸೇರಿದಂತೆ ವಿವಿಧ ಪೊಲೀಸ್ ಠಾಣೆಯ ಸಾವಿರಾರು ಪೊಲೀಸರನ್ನು ನಗರದಲ್ಲಿ ನಿಯೋಜಿಸಲಾಗಿತ್ತು.