(Border-Gavaskar tourney)ಪರ್ತ್: ನ್ಯೂಜಿಲೆಂಡ್ ವಿರುದ್ಧ ತವರಿನಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ ಹೀನಾಯ ಸೋಲು ಅನುಭವಿಸಿದ್ದ ಭಾರತ ತಂಡ, ಇದೀಗ ಆಸ್ಟ್ರೇಲಿಯಾ ನೆಲದಲ್ಲಿ ಭರ್ಜರಿ ಕಂಬ್ಯಾಕ್ ಮಾಡಿದೆ. ಬಾರ್ಡರ್-ಗವಾಸ್ಕರ್ ಟೂರ್ನಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಐತಿಹಾಸಿಕ ಗೆಲುವು ದಾಖಲಿಸಿದೆ. ಬೃಹತ್ 543 ರನ್ ಟಾರ್ಗೆಟ್ ಬೆನ್ನು ಹತ್ತಿದ ಆಸ್ಟ್ರೇಲಿಯಾ ನಾಲ್ಕನೇ ದಿನದಂದು 238 ರನ್ಗೆ ಆಲೌಟ್ ಆಗುವ ಮೂಲಕ ಸೋಲೊಪ್ಪಿಕೊಂಡಿತು. ಭಾರತ 295 ರನ್ಗಳ ಗೆಲುವು ದಾಖಲಿಸಿತು.
