ಚೆನ್ನೈ: ತಮಿಳುನಾಡಿನ ಶಿವಕಾಶಿಯಲ್ಲಿರುವ ಪಟಾಕಿ ಘಟಕದಲ್ಲಿ ಸಂಭವಿಸಿದ ಭಾರಿ ಸ್ಫೋಟದಲ್ಲಿ ಮಹಿಳೆ ಸೇರಿದಂತೆ ಕನಿಷ್ಠ ಐವರು ಸಾವನ್ನಪ್ಪಿದ್ದಾರೆ.
ತೀವ್ರ ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಕೆಲವರನ್ನು ಇಲ್ಲಿಯವರೆಗೆ ರಕ್ಷಿಸಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಘಟಕದ ಆವರಣದೊಳಗೆ ಪಟಾಕಿಗಳು ಸಿಡಿಯುತ್ತಲೇ ಇರುವುದರಿಂದ ದಟ್ಟವಾದ ಹೊಗೆ ಹೊರಡುತ್ತಿದೆ. ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸುತ್ತಿದ್ದಾರೆ