ಜೈಪುರ : ಆಸ್ಪತ್ರೆಯೊಂದರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿ, 6 ರೋಗಿಗಳು ಸಜೀವದಹನವಾಗಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ.
ಶಾರ್ಟ್ ಸರ್ಕ್ಯೂಟ್‌ನಿಂದ ಈ ಅಗ್ನಿ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ಹಲವಾರು ಗಂಭೀರ ರೋಗಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಘಟನಾ ಸ್ಥಳದಲ್ಲಿದ್ದ ವೈದ್ಯರು, ದಾದಿಯರು ಮತ್ತು ಅಗ್ನಿಶಾಮಕ ದಳದ ತಂಡವು ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಯಿತು.
ಸರ್ಕಾರಿ ಸ್ವಾಮ್ಯದ ಆಸ್ಪತ್ರೆಯಲ್ಲಿ ಈ ಘಟನೆ ಸಂಭವಿಸಿದೆ. ಸ್ಟೋರೇಜ್ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಾಗ ನ್ಯೂರೋ ಐಸಿಯುನಲ್ಲಿ 11 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದರು. ಇತರ ಹದಿನಾಲ್ಕು ರೋಗಿಗಳನ್ನು ಬೇರೆ ಐಸಿಯುನಲ್ಲಿ ದಾಖಲಿಸಲಾಯಿತು. ಎಲ್ಲರನ್ನೂ ಯಶಸ್ವಿಯಾಗಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಯಿತು ಎಂದು ತಿಳಿದುಬಂದಿದೆ.
ಬೆಂಕಿಯಿಂದಾಗಿ ಕಟ್ಟಡದಲ್ಲಿ ಹೊಗೆ ವೇಗವಾಗಿ ಹರಡಿತು. ಬೆಂಕಿಯಿಂದಾಗಿ ಆ ಪ್ರದೇಶದಲ್ಲಿ ಸಂಗ್ರಹಿಸಲಾಗಿದ್ದ ವಿವಿಧ ದಾಖಲೆಗಳು, ಐಸಿಯು ಉಪಕರಣಗಳು, ರಕ್ತದ ಮಾದರಿ ಟ್ಯೂಬ್‌ಗಳು ಮತ್ತು ಇತರ ವಸ್ತುಗಳು ಸುಟ್ಟುಹೋಗಿವೆ.
ಘಟನೆ ಕುರಿತು ತನಿಖೆ ನಡೆಸುವಂತೆ ಆಸ್ಪತ್ರೆ ಆಡಳಿತ ಆದೇಶಿಸಿದೆ. ಪೊಲೀಸರು ಮತ್ತು ವಿಧಿವಿಜ್ಞಾನ ತಂಡವು ಬೆಂಕಿಯ ಕಾರಣದ ಬಗ್ಗೆ ವಿವರವಾದ ತನಿಖೆ ನಡೆಸುತ್ತಿದೆ.