ಹುಬ್ಬಳ್ಳಿ : ಅಪ್ರಾಪ್ತ ಬಾಲಕಿ ಮೇಲೆ ಮೂವರು ಅಪ್ರಾಪ್ತ ಬಾಲಕರು ಅತ್ಯಾಚಾರ ಮಾಡಿದ್ದಾರೆ. ಅಷ್ಟೇ ಅಲ್ಲಾ ವಿಡಿಯೋ ಕೂಡ ಮಾಡಿಟ್ಟಿಕೊಂಡು ತಮ್ಮ ವಿಕೃತಿ ಮೆರದಿದ್ದಾರೆ. ಏಳನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿ ಮೇಲೆ ಮೂವರು ಅಪ್ರಾಪ್ತ ಬಾಲಕರು ಅತ್ಯಾಚಾರ ಮಾಡಿದ್ದಾರೆ.
ಹುಬ್ಬಳ್ಳಿ ನಗರದ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಓರ್ವ ಬಾಲಕನ ಮನೆಯಲ್ಲಿ ಯಾರು ಇಲ್ಲದೇ ಇದ್ದಾಗ, ಬಾಲಕಿಯನ್ನು ಕರೆದುಕೊಂಡು ಹೋಗಿ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದಾರೆ. ಬಳಿಕ ವಿಡಿಯೋ ಮಾಡಿಟ್ಟುಕೊಂಡು ತನ್ನ ಇನ್ನೊಬ್ಬ ಸ್ನೇಹಿತನಿಗೆ ಹೇಳಿದ್ದ. ಆತ ಮಾರನೇ ದಿನ ಬಾಲಕಿಯನ್ನು ಕರೆದುಕೊಂಡು ಹೋಗಿ ಬೆದರಿಕೆ ಹಾಕಿ ಅತ್ಯಾಚಾರ ಮಾಡಿದ್ದಾನೆ. ಜೊತೆಗೆ ತನ್ನ ಮತ್ತೊಬ್ಬ ಸ್ನೇಹಿತನಿಗೆ ಹೇಳಿದ್ದಾನೆ. ಆತ ಕೂಡ ಬಾಲಕಿಗೆ ಬೆದರಿಕೆ ಹಾಕಿ ಮತ್ತೊಂದು ದಿನ ಬಾಲಕಿಯನ್ನು ಕರೆದುಕೊಂಡು ಹೋಗಿ ಅಚ್ಯಾಚಾರ ಮಾಡಿದ್ದಾನೆ.
ಬಾಲಕಿ ತನ್ನ ಮೇಲೆ ಅತ್ಯಾಚಾರವಾಗಿದ್ರೂ ಮನೆಯವರಿಗೆ ಈ ಬಗ್ಗೆ ಹೇಳಿರಲಿಲ್ಲ. ಆದರೆ ನಿನ್ನೆ ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಈ ವೇಳೆ ತಾಯಿ ವಿಚಾರಿಸಿದಾಗ ಬಾಲಕಿ ತನ್ನ ಮೇಲೆ ನಡೆದಿರೋ ಅತ್ಯಾಚಾರ ಬಗ್ಗೆ ಹೇಳಿದ್ದಾಳೆ. ಈ ಹಿನ್ನೆಲೆಯಲ್ಲಿ ಬಾಲಕಿ ಮತ್ತು ಬಾಲಕಿಯ ತಾಯಿ ಶಹರ ಠಾಣೆಗೆ ಆಗಮಿಸಿ ದೂರು ನೀಡಿದ್ದಾರೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಶಹರ ಠಾಣೆಯ ಪೊಲೀಸರು ಮೂವರು ಅಪ್ರಾಪ್ತ ಬಾಲಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
































