ಮಹಿಳೆಯೊಬ್ಬಳು ಸೋಮವಾರ ತನ್ನ ನಾಲ್ವರು ಮಕ್ಕಳೊಂದಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ,ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.
ನಾಲ್ವರು ಮಕ್ಕಳು ಸಾವಿಗೀಡಾಗಿದ್ದಾರೆ. ಮಹಿಳೆಯನ್ನು ಸ್ಥಳೀಯರು ರಕ್ಷಿಸಿದ್ದಾರೆ.
ಸಾವಿಗೀಡಾದವರನ್ನು ಕೊಲ್ಹಾರ ತಾಲ್ಲೂಕಿನ ತೆಲಗಿ ಗ್ರಾಮದ ತನು ನಿಂಗರಾಜ ಭಜಂತ್ರಿ (5), ರಕ್ಷಾ ನಿಂಗರಾಜ ಭಜಂತ್ರಿ (3) ಹಾಗೂ ಅವಳಿ ಮಕ್ಕಳಾದ ಹಸೇನ ನಿಂಗರಾಜ ಭಜಂತ್ರಿ, ಹುಸೇನ ನಿಂಗರಾಜ ಭಜಂತ್ರಿ (13 ತಿಂಗಳು) ಎಂದು ಗುರುತಿಸಲಾಗಿದೆ.
ಕಾಲುವೆಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ಮೃತ ಮಕ್ಕಳ ತಾಯಿ ಭಾಗ್ಯಳನ್ನು ಮೀನುಗಾರರು ಕಾಲುವೆಯಿಂದ ಎತ್ತಿ ಬದುಕಿಸಿದ್ದಾರೆ.
ಕೌಟುಂಬಿಕ ಕಲಹದಿಂದ ನೊಂದ ಮಹಿಳೆ ತನ್ನ ನಾಲ್ವರು ಮಕ್ಕಳೊಂದಿಗೆ ಕಾಲುವೆಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದರು.
ಸ್ಥಳದಲ್ಲಿ ಸಂಬಂಧಿಗಳ ರೋಧನೆ ಮುಗಿಲು ಮಟ್ಟಿದೆ.