ನವದೆಹಲಿ :ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪಾದಯಾತ್ರೆ ವೇಳೆ ವ್ಯಕ್ತಿಯೊಬ್ಬರು ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮೇಲೆ ನಿಗೂಢ ದ್ರವ ರೂಪಕ ಎಸೆದಿದ್ದಾರೆ. ಕೇಜ್ರಿವಾಲ್ ದಕ್ಷಿಣ ದೆಹಲಿಯ ಮಾಳವೀಯ ನಗರದಲ್ಲಿ ಬೆಂಬಲಿಗರೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ದ್ರವ ರೂಪಕ ಎಸೆದ ವ್ಯಕ್ತಿಯನ್ನು ಅಶೋಕ್ ಝಾ ಎಂದು ಗುರುತಿಸಲಾಗಿದ್ದು, ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಕೇಜ್ರಿವಾಲ್, ತಮ್ಮ ಮೇಲಿನ ದಾಳಿಯ ಬಗ್ಗೆ ಪ್ರತಿಕ್ರಿಯಿಸಿ, ರಾಷ್ಟ್ರ ರಾಜಧಾನಿಯಲ್ಲಿ ಅಪರಾಧಗಳನ್ನು ನಿಲ್ಲಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಒತ್ತಾಯಿಸಿದ್ದಾರೆ.
ಈ ದಾಳಿಯ ಹಿಂದೆ ಬಿಜೆಪಿ ಕೈವಾಡವಿದೆ ಎಂದು ಎಎಪಿ ನಾಯಕ ಸೌರಭ್ ಭಾರದ್ವಾಜ್ ಆರೋಪಿಸಿದ್ದಾರೆ. ದೆಹಲಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುಸಿದಿದೆ ಮತ್ತು ಕೇಂದ್ರ ಸರ್ಕಾರ ಮತ್ತು ಗೃಹ ಸಚಿವರು ಏನನ್ನೂ ಮಾಡುತ್ತಿಲ್ಲ” ಎಂದು ಭಾರದ್ವಾಜ್ ಹೇಳಿದ್ದಾರೆ.