ಚಾರ್ಮಾಡಿ ಘಾಟ್ನಲ್ಲಿ ರಾತ್ರಿ ವೇಳೆ ನಡೆಯುವ ಅಪರಾಧ ಚಟುವಟಿಕೆಗಳಿಗೆ ತಡೆಯಲು ಪೊಲೀಸ್ ಇಲಾಖೆ ಹೊಸ ನಿಯಮ ರೂಪಿಸಿದ್ದು, ಈಗಾಗಲೇ ಜಾರಿಯಾಗಿದೆ.
ಚಿಕ್ಕಮಗಳೂರು-ದಕ್ಷಿಣ ಕನ್ನಡ ಜಿಲ್ಲೆಗಳಲು ಸಂಪರ್ಕಿಸುವ ಕೊಟ್ಟಿಗೆಹಾರ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 173ರ ಚಾರ್ಮಡಿ ಘಟ್ ನಲ್ಲಿ ವಾಹನ ಸಂಚಾರಕ್ಕೆ ಹೊಸ ನಿಯಮ ಜಾರಿಗೆ ತರಲಾಗಿದೆ. ಕೊಟ್ಟಿಗೆಹಾರ ಚೆಕ್ ಪೋಸ್ಟ್ನಲ್ಲಿ ಪ್ರತಿ ವಾಹನಗಳ ತಪಾಸಣೆ ಮಾಡುವುದರ ಜೊತೆಗೆ ಚಾರ್ಮಾಡಿ ಘಾಟ್ನಲ್ಲಿ ರಾತ್ರಿ ವೇಳೆ ಐದು ವಾಹನಗಳನ್ನು ಒಟ್ಟಿಗೆ ಕಳುಹಿಸಲಾಗುತ್ತಿದೆ.
ಈ ನಿಯಮ ಚಾರ್ಮಡಿ ಘಾಟ್ ನಲ್ಲಿ ರಾತ್ರಿ ಸಂಚರಿಸುವ ವಾಹನಗಳಿಗೆ ಅನ್ವಯವಾಗಲಿದೆ. ಚಾರ್ಮಡಿ ಘಾಟ್ ನಲ್ಲಿ ರಾತ್ರಿ 12ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ತೆರಳುವ ವಾಹನಗಳನ್ನು ಕೊಟ್ಟಿಗೆಹಾರ ಚಕ್ ಪೋಸ್ಟ್ ಬಳಿ ನಿಲ್ಲಿಸಿ 5 ವಾಹನಗಳನ್ನು ಜೊತೆ ಮಾಡಿ ಬಿಡಲಾಗುತ್ತದೆ.
ಈ ಮೂಲ ಚಿಕ್ಕಮಗಳೂರು ಜಿಲ್ಲಾಡಳಿತ ಚಾರ್ಮಡಿ ಘಾಟ್ ನಲ್ಲಿ ರಾತ್ರಿ ವೇಳೆ ಸಿಂಗಲ್ ವಾಹನ ಸಂಚಾರ ಅಥವಾ ಒನ್ನೊಂದೇ ವಾಹನಗಳ ಸಂಚಾರಕ್ಕೆ ನಿರ್ಬಂಧಿಸಿದೆ. ಕೊಟ್ಟಿಗೆಹಾರ ಚಕ್ ಪೋಸ್ಟ್ ನಲ್ಲಿ ಓರ್ವ ಸಬ್ ಇನ್ಸ್ ಪೆಕ್ಟರ್ ನೇತೃತ್ವದಲ್ಲಿ ಸಿಬ್ಬಂದಿ ಕರ್ತವ್ಯ ನಿರ್ವಹಿಸಲಿದ್ದಾರೆ. 24 ಗಂಟೆ ಚಾರ್ಮಡಿ ಘಾಟ್ ನಲ್ಲಿ ಪೊಲೀಸ್ ವಾಹ ಗಸ್ತು ತಿರುಗಲಿದೆ.