ಬೆಂಗಳೂರು: ಜನಿವಾರ ಧರಿಸಿ ಸಿಇಟಿ 2025 ಪರೀಕ್ಷೆಯಲ್ಲಿ ಅನುಮತಿ ನಿರಾಕರಿಸಿದ ಕರ್ನಾಟಕ ಶಿಕ್ಷಣ ಪ್ರಾಧಿಕಾರದ ಕ್ರಮ ಪ್ರಶ್ನಿಸಲಾದ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಅಖಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಶನಿವಾರ ವಿಚಾರಣೆ ನಡೆಸಿದ ನ್ಯಾಯಪೀಠವು ವಿಚಾರಣೆಯನ್ನು ಜೂನ್ 9ಕ್ಕೆ ಮುಂದೂಡಿದೆ.
