ಬೆಳಗಾವಿ: ಹುಬ್ಬಳ್ಳಿಯಿಂದ ಕೊಲ್ಹಾಪುರಕ್ಕೆ ಹೋಗುತ್ತಿದ್ದಾಗ ನಿಂತಿದ್ದ ಕಂಟೆನರ್ ಲಾರಿಗೆ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಂದು ವರ್ಷದ ಮಗು ಬಚಾಅವ್ ಆಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಅಪಘಾತದಲ್ಲಿ ಮಹಾರಾಷ್ಟ್ರದ ಕೊಲ್ಲಾಪುರದ ಸಂಭಾಜಿ ನಗರದ ಜಿಗರ ಕಿಶೋರ ನಾಕ್ರಾನಿ ಹಾಗೂ ಪತ್ನಿ ಹೇತಿಕಾ (24) ಮೃತಪಟ್ಟಿದ್ದಾರೆ. ಒಂದು ವರ್ಷದ ಮಗಳು ವೃಷ್ಟಿ ಬದುಕುಳಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾಳೆ.

































