ತುಮಕೂರು: ಪ್ರಥಮ ಪಿಯುಸಿ ವಿದ್ಯಾರ್ಥಿಯೋರ್ವ ಕಾಲೇಜಿನ ಮುಂದೆಯೇ ಹೃದಯಾಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರು ಜಿಲ್ಲೆಯ ಗುಬ್ಬಿಯಲ್ಲಿ ನಡೆದಿದೆ.
ಶಮಂತ್ (17) ಮೃತ ವಿದ್ಯಾರ್ಥಿ. ಗುಬ್ಬಿ ತಾಲೂಕಿನ ನಿಟ್ಟೂರಿನಲ್ಲಿ ಕಾಲೇಜಿನ ಮುಂದೆ ಸ್ನೇಹಿತರ ಜೊತೆ ಮಾತನಾಡುತ್ತಿದ್ದ ಶಮಂತ್ ಏಕಾಏಕಿ ಕುಸಿದುಬಿದ್ದಿದ್ದಾನೆ. ತಕ್ಷಣ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗ ಮಧ್ಯೆಯೇ ವಿದ್ಯಾರ್ಥಿ ಕೊನೆಯುಸಿರೆಳೆದಿದ್ದಾನೆ.