ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ಶುಕ್ರವಾರದಂದು ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಸಿ.ಎಸ್ ಷಡಕ್ಷರಿ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.
ಈ ಕುರಿತಂತೆ ರಾಜ್ಯ ಚುನಾವಣಾಧಿಕಾರಿ ಎ.ಹನುಮನರಸಯ್ಯ ಅವರು ಅಧಿಕೃತ ಘೋಷಣೆ ಮಾಡಿದ್ದು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶುಕ್ರವಾರದಂದು ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಬಿ.ಪಿ ಕೃಷ್ಣೇಗೌಡ ಹಾಗೂ ಸಿ.ಎಸ್ ಷಡಕ್ಷರಿ ಅವರು ಕಣದಲ್ಲಿದ್ದರು ಅಂತ ತಿಳಿಸಿದ್ದಾರೆ.
ಶುಕ್ರವಾರದಂದು ನಡೆದಂತ ಸಂಘದ ರಾಜ್ಯಾಧ್ಯಕ್ಷ ಸ್ಥಾನದ 2024-2029ನೇ ಅವಧಿಯ ಚುನಾವಣೆಯಲ್ಲಿ ಸಿಎಸ್ ಷಡಕ್ಷರಿಯವರು 507 ಮತಗಳನ್ನು ಗಳಿಸಿ ಪ್ರತಿ ಸ್ಪರ್ಧಿ ಬಿ.ಪಿ ಕೃಷ್ಣೇಗೌಡ ವಿರುದ್ಧ ಗೆಲುವು ಸಾಧಿಸಿರುವುದಾಗಿ ಘೋಷಿಸಿದ್ದಾರೆ.