ಜೈಪುರ : ತನ್ನ ಚೊಚ್ಚಲ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲೇ ಸ್ಪೋಟಕ ಸೆಂಚುರಿ ಸಿಡಿಸಿದ 14ರ ಹರೆಯದ ವೈಭವ್ ಸೂರ್ಯವಂಶಿಗೆ ಬಿಹಾರ ರಾಜ್ಯ ಸರ್ಕಾರ 10 ಲಕ್ಷ ರೂ. ಬಹುಮಾನ ನೀಡಿ ಘೋಷಿಸಿದೆ.
ಶತಕ ಸಿಡಿಸಿದ ರಾಜಸ್ಥಾನ್ ರಾಯಲ್ಸ್ ತಂಡದ ವೈಭವ್ ಸೂರ್ಯವಂಶಿಗೆ ಸಿಎಂ ನಿತೀಶ್ ಕುಮಾರ್ ತಮ್ಮ ನಿವಾಸದಲ್ಲಿ ಸನ್ಮಾನಿಸಿದರು. ಇದೇ ವೇಳೆ ಬಿಹಾರ ರಾಜ್ಯ ಸರ್ಕಾರದಿಂದ 10 ಲಕ್ಷ ರೂ. ಬಹುಮಾನವನ್ನೂ ಘೋಷಣೆ ಮಾಡಿದರು.
ಕಿರಿಯ ವಯಸ್ಸಿನಲ್ಲೇ ಅವರ ಪ್ರತಿಭೆ ಮುಂದೆ ಭಾರತೀಯ ಕ್ರಿಕೆಟ್ಗೆ ಹೊಸ ಭರವಸೆಯಾಗಿದೆ. ಇಂದು ಇಡೀ ದೇಶವೇ ಅವನ ಬಗ್ಗೆ ಹೆಮ್ಮೆ ಪಡುತ್ತಿದೆ. 2024ರಲ್ಲಿ ನಾನು ವೈಭವ್ ಮತ್ತು ಅವರ ತಂದೆಯನ್ನ ಭೇಟಿಯಾಗಿದ್ದೆ, ಆಗಲೇ ನಾನು ಅವರ ಭವಿಷ್ಯ ಉಜ್ವಲವಾಗಿರಲಿದೆ ಎಂದು ಹಾರೈಸಿದ್ದೆ. ಹಾಗೆಯೇ ಇಂದು ಯಶಸ್ಸು ಕಾಣುತ್ತಿದ್ದಾರೆ. ಐಪಿಎಲ್ನಲ್ಲಿ ಅವರ ಅತ್ಯುತ್ತಮ ಪ್ರದರ್ಶನದ ಬಳಿಕ ನಾನು ಅವರಿಗೆ ಫೋನ್ ಮಾಡಿ ಮಾತನಾಡಿದ್ದೆ. ವೈಭವ್ ಭವಿಷ್ಯದಲ್ಲಿ ಭಾರತೀಯ ಕ್ರಿಕೆಟ್ ತಂಡದಲ್ಲಿ ಇನ್ನಷ್ಟು ದಾಖಲೆಗಳನ್ನು ಸೃಷ್ಟಿಸಿ ದೇಶಕ್ಕೆ ಕೀರ್ತಿ ತರಲೆಂದು ಹಾರೈಸುತ್ತೇನೆ ಎಂದು ವೈಭವ್ ಸೂರ್ಯವಂಶಿಗೆ ಶುಭಕೋರಿದರು.
ತನ್ನ ಚೊಚ್ಚಲ ಪಂದ್ಯದಲ್ಲೇ ವೈಭವ್ ಸೂರ್ಯವಂಶಿ ಸಿಕ್ಸರ್ ಸಿಡಿಸುವ ಮೂಲಕ ಐಪಿಎಲ್ಗೆ ಪದಾರ್ಪಣೆ ಮಾಡಿದ್ದರು. ಇದೀಗ ತಮ್ಮ 3ನೇ ಪಂದ್ಯದಲ್ಲಿ 35 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸುವ ಮೂಲಕ ಐಪಿಎಲ್ನಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ಅವರು ಐಪಿಎಲ್ ಇತಿಹಾಸದಲ್ಲಿ ವೇಗದ ಶತಕ ಬಾರಿಸಿದ 2ನೇ ಆಟಗಾರ ಹಾಗೂ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.