ಮುಂಬೈ : ಟೀಂ ಇಂಡಿಯಾ ಕ್ರಿಕೆಟಿಗ ಯುಜುವೇಂದ್ರ ಚಹಲ್ ಹಾಗೂ ಖ್ಯಾತ ಕೊರಿಯೋಗ್ರಾಫರ್ ಧನಶ್ರೀ ವರ್ಮಾ ದಾಂಪತ್ಯ ಜೀವನ ಮುರಿದುಬಿತ್ತಾ ಎಂಬ ಅನುಮಾನ ಶುರುವಾಗಿದೆ.
ಕಳೆದ ಕೆಲವು ವರ್ಷಗಳಿಂದಲೂ ಚಹಲ್-ಧನಶ್ರೀ ದಾಂಪತ್ಯ ಜೀವನದಲ್ಲಿ ಬಿರುಕುಬಿಟ್ಟಿದೆ ಎನ್ನುವಂತಹ ಮಾತುಗಳು ಕೇಳಿ ಬಂದಿದ್ದವು.
ಇದೀಗ ಅಚ್ಚರಿ ಎಂಬಂತೆ ಯುಜುವೇಂದ್ರ ಚಹಲ್ ಹಾಗೂ ಧನಶ್ರೀ ವರ್ಮಾ ಇಬ್ಬರು ಇನ್ ಸ್ಟಾಗ್ರಾಂನಲ್ಲಿ ಒಬ್ಬರಿಗೊಬ್ಬರು ಅನ್ ಫಾಲೋ ಮಾಡಿದ್ದಾರೆ. ಚಹಲ್ ಅವರು ಧನಶ್ರೀ ಅವರೊಂದಿಗಿನ ಎಲ್ಲಾ ಫೋಟೊಗಳನ್ನು ಸಾಮಾಜಿಕ ಮಾಧ್ಯಮ ಇನ್ ಸ್ಟಾಗ್ರಾಂನಲ್ಲಿ ಅಳಿಸಿ ಹಾಕಿದ್ದಾರೆ. ಆದರೆ, ಚಹಲ್ ಅವರನ್ನು ಅನ್ ಫಾಲೋ ಮಾಡಿರುವ ಧನಶ್ರೀ ಅವರೊಂದಿಗಿನ ಫೋಟೊಗಳನ್ನು ಈವರೆಗೆ ಅಳಿಸಿ ಹಾಕಿಲ್ಲ.