ನವದೆಹಲಿ : ರಾಜಧಾನಿಯ ಕೆಂಪು ಕೋಟೆಯ ಬಳಿ ಐ20 ಕಾರು ಸ್ಫೋಟಗೊಂಡ ದೃಶ್ಯಗಳು ಲಭ್ಯವಾಗಿದೆ. ನಿಧಾನವಾಗಿ ಚಲಿಸುತ್ತಿದ್ದ ಕಾರು ಒಮ್ಮಿಂದೊಮ್ಮೆಗೆ ಸ್ಫೋಟಗೊಂಡಿರುವುದು ಕಂಡುಬಂದಿದೆ.
ಘಟನೆಯ 15 ಸೆಕೆಂಡುಗಳ ಕ್ಲಿಪ್ ದೊರೆತಿದ್ದು, ಇದರಲ್ಲಿ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಜನದಟ್ಟಣೆಯ ಪ್ರದೇಶ ಹಾಗೂ ಅನೇಕ ವಾಹನಗಳು ನಿಧಾನವಾಗಿ ಚಲಿಸುತ್ತಿರುವುದನ್ನು ಕಾಣಬಹುದಾಗಿದೆ.
ಸೋಮವಾರ ಸಂಜೆ 6:50 ಕ್ಕೆ ಸ್ಫೋಟಕ ತುಂಬಿದ ಐ20 ಕಾರು ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಕೂಡಲೇ ಸಿಸಿಟಿವಿ ಕ್ಯಾಮೆರಾಗಳು ಆಫ್ ಆಗಿದೆ. ಘಟನೆಯ ಆರಂಭದಲ್ಲಿ 9 ಮಂದಿ ಸಾವನ್ನಪ್ಪಿ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
ಇದೀಗ ಗಾಯಗೊಂಡ 20 ಜನರ ಪೈಕಿ 4 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಸಾವನ್ನಪ್ಪಿದವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಇನ್ನು ಈ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಲಾಗಿದೆ.































