ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿಯ ಮುಸುಕುದಾರಿಗಳಿಂದ ಕಿಡ್ನ್ಯಾಪ್ ಯತ್ನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ದೊರೆತ್ತಿದೆ.
ಮೂವರು ಕಾರಿನಲ್ಲಿ ಮುಸುಕುಧಾರಿಗಳು ಕಿಡ್ನಾಪ್ ಮಾಡಲು ಪ್ರಯತ್ನಿಸಿ ಚೂರಿಯಿಂದ ಇರಿದು ಪರಾರಿಯಾಗಿರುವುದಾಗಿ ಪೊಲೀಸರಿಗೆ ದೂರು ನೀಡಲಾಗಿತ್ತು.
ಬೆಳ್ತಂಗಡಿ ನಗರದ ಸುದೇಮುಗೇರು ಎಂಬಲ್ಲಿ ಸ್ಕೂಟರ್ ನಲ್ಲಿ ಪ್ರಯಾಣ ಮಾಡುವಾಗ ಓಮಿನಿ ಕಾರಿನಲ್ಲಿ ಬಂದ ಮೂವರು ಅಪರಿಚಿತರು ಕಿಡ್ನಾಪ್ ಮಾಡಲು ಯತ್ನಿಸಿ ಚೂರಿ ಇರಿದು ಪರಾರಿಯಾಗಿದ್ದರು ಎಂದು ವಿದ್ಯಾರ್ಥಿನಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿ ದೂರು ನೀಡಿದ್ದರು.
ಈ ಗಂಭೀರ ಪ್ರಕರಣದ ಬೆನ್ನುಹತ್ತಿದ ಪೊಲೀಸರಿಗೆ ಇದೀಗ ಶಾಕ್ ಆಗಿದೆ. ವಿದ್ಯಾರ್ಥಿನಿ ಕಾಲೇಜಿಗೆ ತೆರಳಲು ಇಷ್ಟವಿಲ್ಲದ ಕಾರಣ ಕಿಡ್ನ್ಯಾಪ್ ಯತ್ನದ ಡ್ರಾಮ ಮಾಡಿರುವುದಾಗಿ ಪೊಲೀಸರಿಗೆ ಗೊತ್ತಾಗಿದೆ.
ಪ್ರಕರಣ ಇದೀಗ ಸುಖಾಂತ್ಯ ಕಂಡಿದ್ದು, ಇಡೀ ಬೆಳ್ತಂಗಡಿಯ ಜನ ಇದೀಗ ನಿಟ್ಟುಸಿರು ಬಿಟ್ಟಿದ್ದಾರೆ
































