ಪ್ರೀತಿಸಿದ ಶಿಕ್ಷಕಿ ಕೈಕೊಟ್ಟ ಕಾರಣ ಶಿಕ್ಷಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಕಳಿ ಗ್ರಾಮದಲ್ಲಿ ನಡೆದಿದೆ.
ಟ್ಯೂಷನ್ ಸೆಂಟರ್ ನಡೆಸುತ್ತಿದ್ದ 35 ವರ್ಷದ ಶಿಕ್ಷಕ ಆನಂದ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಯಾಗಿದ್ದಾರೆ. ಶಿಕ್ಷಕ ಆನಂದ, ವಿವಾಹಿತ ಶಿಕ್ಷಕಿ ಹೇಮಲತಾರೊಂದಿಗೆ ಕಳೆದ 8 ವರ್ಷಗಳಿಂದ ಅಕ್ರಮ ಪ್ರೇಮ ಸಂಬಂಧದಲ್ಲಿದ್ದರು. ಇಬ್ಬರೂ ಸೇರಿ ಮಾಕಳಿಯಲ್ಲಿ ಟ್ಯೂಷನ್ ಸೆಂಟರ್ ಆರಂಭಿಸಿದ್ದರು. ಆದರೆ ಇತ್ತೀಚೆಗೆ ಹೇಮಲತಾ ಮತ್ತೊಬ್ಬನಾದ ನಿರಂಜನ್ ಜತೆಗೆ ಹೆಚ್ಚಿನ ಒಡನಾಟ ಹೊಂದಿದ್ದ ರಿಂದ ಇವರಿಬ್ಬರ ನಡುವೆ ಮನಸ್ತಾಪ ಉಂಟಾಗಿದೆ. ಆನಂದ ಟ್ಯೂಷನ್ ಸೆಂಟರ್ ಹಣವಷ್ಟೇ ಅಲ್ಲದೆ, ತನ್ನ ಮನೆಯಿಂದಲೂ ಸುಮಾರು 5 ಲಕ್ಷ ರು. ನೀಡಿದ್ದರಾಗಿ ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಬ್ಬರ ನಡುವೆ ಗಲಾಟೆ ಶುರುವಾಗಿ, ಹೇಮಲತಾ ತನ್ನ ಪತಿ ತಿಮ್ಮಯ್ಯಗೆ ವಿಷಯ ತಿಳಿಸಿ ಬೆದರಿಕೆ ಹಾಕಿದ್ದರು. ಆನಂದ ಆತ್ಮಹತ್ಯೆಗೂ ಮೊದಲು ಡೆತ್ ನೋಟ್ ಬರೆದು, ವಾಟ್ಸ್ ಆ್ಯಪ್ ಸ್ಟೇಟಸ್‌ನಲ್ಲೂ ಹೇಮಲತಾಳ ಕಿರುಕುಳದ ಬಗ್ಗೆ ಮಾಹಿತಿ ಹಾಕಿದ್ದಾನೆ. ಮಾಕಳಿಯ ಟ್ಯೂಷನ್ ಸೆಂಟರ್‌ನಲ್ಲಿ ಪ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಮೃತದೇಹ ಕೊಡಲಾಗಿದೆ.
ಘಟನೆ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 108 ಬಿ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿತ ಶಿಕ್ಷಕಿ ಹೇಮ ಲತಾರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.