ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಬಬ್ಬೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇದೇ ಮೇ.26 ಮತ್ತು 27ರಂದು ಬೆಳಿಗ್ಗೆ 10ಕ್ಕೆ ಜಿಲ್ಲೆಯ ರೈತರಿಗೆ ಜೇನು ಕೃಷಿಯ ಕುರಿತು ಎರಡು ದಿನದ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.
ತರಬೇತಿ ಕಾರ್ಯಕ್ರಮದಲ್ಲಿ ಜೇನು ಕೃಷಿ ತಜ್ಞರು ಹಾಗೂ ನಿವೃತ್ತ ಸಹಾಯಕ ನಿರ್ದೇಶಕ ಮೇಟಿಕುರ್ಕಿಯ ಡಾ.ಶಾಂತವೀರಯ್ಯ ಅವರು ಜೇನು ಸಾಕಾಣಿಕೆಯ ಸಮಗ್ರ ಮಾಹಿತಿ ಬಗ್ಗೆ ವಿಷಯ ಮಂಡನೆ ಹಾಗೂ ಪ್ರಾತ್ಯಕ್ಷಿಕೆ ನೀಡುವರು.
ಆಸಕ್ತ 40 ಜನ ರೈತಭಾಂದವರು ತರಬೇತಿಯಲ್ಲಿ ಭಾಗವಹಿಸಲು 8277931058 ದೂರವಾಣಿ ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿ ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು. ಮೊದಲು ನೋಂದಾವಣೆ ಮಾಡಿಕೊಂಡ 40 ರೈತಭಾಂದವರು ಫ್ರೂಟ್ಸ್ ಐಡಿ (ಎಫ್‍ಐಡಿ) ಅಥವಾ ಆಧಾರ್ ಕಾರ್ಡ್‍ನೊಂದಿಗೆ ತರಬೇತಿಗೆ ಹಾಜರಾಗಬೇಕು ಎಂದು ಬಬ್ಬೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ ಕೋರಿದ್ದಾರೆ.
 
				 
         
         
         
															 
                     
                     
                     
                     
                    


































 
    
    
        