ವಿಜಯನಗರ: ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಉಚ್ಚಂಗಿದುರ್ಗದಲ್ಲಿ ಟ್ರಾಕ್ಟರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಂಜುನಾಥ್ ( 32) ಸ್ಥಳದಲ್ಲೇ ಸಾವನ್ನಪ್ಪಿದ ದುರ್ದೈವಿಯಾಗಿದ್ದು, ಅಣಜಿಗೇರೆ ಕಡೆಯಿಂದ ಪಾದಗಟ್ಟೆ ಕಡೆ ಹೊರಟಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಸ್ಥಳಕ್ಕೆ ಹರಪನಹಳ್ಳಿ ಸಿಪಿಐ ನಾಗರಾಜ್, ಅರಸಿಕೇರೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದು, ಅರಸೀಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.