ಲಕ್ನೋ: ಉತ್ತರ ಪ್ರದೇಶದ ಮುಜಾಫರ್ನಗರದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಮಹಿಳೆಯೊಬ್ಬಳು ದ್ರೋಹ ಬಗೆದ ತನ್ನ ಪ್ರಿಯಕರನ ಮರ್ಮಾಂಗವನ್ನೇ ಕತ್ತರಿಸಿ ಹಾಕಿದ್ದಾಳೆ.
ಎಂಟು ವರ್ಷಗಳಿಂದ ಯುವತಿಯೊಂದಿಗೆ ಸಂಬಂಧ ಹೊಂದಿದ್ದರೂ ಪ್ರಿಯಕರ ಬೇರೊಬ್ಬ ಮಹಿಳೆಯನ್ನು ಮದುವೆಯಾಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ನಿನ್ನೊಂದಿಗೆ ಮಾತನಾಡಬೇಕು ಎಂದು ಮಹಿಳೆ ಕೇಳಿಕೊಂಡಿದ್ದಳು.
ರೈಲ್ವೇ ನಿಲ್ದಾಣ ರಸ್ತೆ ಬಳಿಯ ಸಿವಿಲ್ ಲೈನ್ಸ್ ಪ್ರದೇಶಕ್ಕೆ ಬಂದ ಗೆಳೆಯನ ಮೇಲೆ ಮಹಿಳೆ ಹಲ್ಲೆ ನಡೆಸಿದ್ದಾಳೆ. ಬಳಿಕ ಆತನ ಗುಪ್ತಾಂಗವನ್ನು ಕತ್ತರಿಸಿದ್ದಾಳೆ. ಇದನ್ನು ಕಂಡ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಪ್ರಿಯಕರನನ್ನು ವೈದ್ಯಕೀಯ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಭೀಕರ ದಾಳಿಯಲ್ಲಿ ಭಾಗಿಯಾಗಿದ್ದಕ್ಕಾಗಿ ಮಹಿಳೆಯನ್ನು ಅಧಿಕಾರಿಗಳು ಬಂಧಿಸಿದ್ದಾರೆ ಮತ್ತು ತನಿಖೆಯನ್ನು ಪ್ರಾರಂಭಿಸಿದ್ದಾರೆ.