ಮಹಾರಾಷ್ಟ್ರ: ಚುನಾವಣಾ ಫಲಿತಾಂಶದ ವಿಚಾರವಾಗಿ EVM ಬಗ್ಗೆ ಪ್ರತಿಪಕ್ಷಗಳ ಆರೋಪದ ನಡುವೆ, EVM ಗಳ ಬಗ್ಗೆ ಆಧಾರರಹಿತ ವಿಡಿಯೋ ಹರಿಬಿಟ್ಟ ವ್ಯಕ್ತಿಯ ವಿರುದ್ಧ ಚುನಾವಣಾ ಆಯೋಗ ದೂರು ದಾಖಲಿಸಿದೆ.
ಮಹಾರಾಷ್ಟ್ರದ ಮುಖ್ಯ ಚುನಾವಣಾಧಿಕಾರಿ ನೀಡಿದ ದೂರಿನ ಮೇರೆಗೆ, ಮುಂಬೈ ಸೈಬರ್ ಪೊಲೀಸರು ವಂಚನೆ ಪ್ರಕರಣವನ್ನು ದಾಖಲಿಸಿದ್ದಾರೆ. EVM ಗಳ ಬಗ್ಗೆ ಸುಳ್ಳು ಮಾಹಿತಿ ಹರಡುವ ಯಾರೇ ಆದರೂ ಕಠಿಣ ಕ್ರಿಮಿನಲ್ ಪ್ರಕರಣವನ್ನು ಎದುರಿಸಬೇಕಾಗುತ್ತದೆ ಎಂದು ಚುನಾವಣಾ ಆಯೋಗ ಎಚ್ಚರಿಸಿದೆ ಎಂದು ವರದಿಯಾಗಿದೆ.