ಮಂಗಳೂರು; ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಫೇಸ್ ಬುಕ್ ನಲ್ಲಿ ಪ್ರಚೋದನಕಾರಿ ಪೋಸ್ಟ್ ಶೇರ್ ಮಾಡಿದ ಆರೋಪದಡಿ ಮಂಗಳೂರಿನ ಕದ್ರಿ ಠಾಣೆ ಪೊಲೀಸರು ಶರಣ್ ಪಂಪ್ ವೆಲ್ ಅವರನ್ನು ವಶಕ್ಕೆ ಪಡೆದಿದ್ದಾರೆ.
ಆರ್ ಎಸ್ ಎಸ್ ಮುಖಂಡರೊಬ್ಬರ ಭಾಷಣದ ವಿಡಿಯೋ ಶೇರ್ ಮಾಡಿದ್ದಾರೆ ಎಂಬ ಆರೋಪದಡಿ ಶರಣ್ ಪಂಪ್ ವೆಲ್ ವಿರುದ್ದ ಎಫ್ಐಆರ್ ದಾಖಲಿಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕದ್ರಿ ಪೊಲೀಸ್ ಠಾಣೆಗೆ ಆಗಮಿಸಿದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್, ಬಿಜೆಪಿ ಜಿಲ್ಲಾಧ್ಯಕ್ಚ ಸತೀಶ್ ಕುಂಪಲ ಆಗಮಿಸಿದ್ದಾರೆ. ಕದ್ರಿ ಠಾಣೆಯ ಬಳಿ ಹಿಂದೂ ಸಂಘಟನೆಯ ಕಾರ್ಯಕರ್ತರು ಸೇರಿದ್ದಾರೆ. ಯಾವುದೇ ನೊಟೀಸ್ ನೀಡದೇ ಕರೆದುಕೊಂಡು ಬಂದಿದ್ದಾರೆ ಎಂದು ಆರೋಪಿಸಲಾಗಿದ್ದು, ಸದ್ಯ ಪೊಲೀಸ್ ಅಧಿಕಾರಿಗಳ ಜೊತೆ ಶಾಸಕರು, ನಾಯಕರ ಮಾತುಕತೆ ನಡೆಸುತ್ತಿದ್ದಾರೆ.
 
				 
         
         
         
															 
                     
                     
                    

































 
    
    
        