ಚೆನ್ನೈ : ನಟ ಕಮಲ್ ಹಾಸನ್ ರಾಜ್ಯಸಭೆ ಪ್ರವೇಶಿಸಲು ರೆಡಿ ಆಗಿದ್ದಾರೆ. ಜೂನ್ 19ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ತಮಿಳುನಾಡಿನ ಡಿಎಂಕೆ ಪಕ್ಷ ಅಭ್ಯರ್ಥಿಗಳ ಪಟ್ಟಿಯಲ್ಲಿ ಪಕ್ಷದ ಮೈತ್ರಿ ಕೂಟದ ಕಮಲ್ ಹಾಸನ್ ಹೆಸರು ಕೂಡ ಇದೆ ಎಂದು ವರದಿಯಾಗಿದೆ.
ಡಿಎಂಕೆ ಬಿಡುಗಡೆ ಮಾಡಿರುವ ಪಟ್ಟಿಯ ಅನುಸಾರ ಸಲ್ಮಾ, ಪಿ. ವಿಲ್ಸನ್, ಎಸ್.ಆರ್. ಶಿವಲಿಂಗಂ ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಗಳಾಗಿ ಆಯ್ಕೆಯಾಗಿದ್ದಾರೆ. ಇದರೊಂದಿಗೆ ಕಮಲ್ ಹಾಸನ್ ಅವರ ಮಕ್ಕಳ್ ನೀಧಿ ಮಯಂ ಪಕ್ಷಕ್ಕೆ ಒಂದು ಸ್ಥಾನ ನೀಡಲಾಗಿದೆ. ಈ ಪಕ್ಷದಿಂದ ಕಮಲ್ ಹಾಸನ್ ಅವರನ್ನು ಆಯ್ಕೆ ಮಾಡಿರುವುದಾಗಿ ಡಿಎಂಕೆ ಪ್ರಕಟಣೆಯಲ್ಲಿ ತಿಳಿಸಿದೆ.
ಜುಲೈ 24 ರಂದು, ತಮಿಳುನಾಡಿನ ಆರು ರಾಜ್ಯಸಭಾ ಸದಸ್ಯರು ನಿವೃತ್ತಿ ಹೊಂದಲಿದ್ದಾರೆ. ರಾಜ್ಯ ಸಭೆಯಲ್ಲಿ ಮಿತ್ರಪಕ್ಷಗಳ ಬಲದ ಆಧಾರದ ಮೇಲೆ, 6 ಸ್ಥಾನಗಳಲ್ಲಿ ಡಿಎಂಕೆ ಸುಲಭವಾಗಿ 4 ಸ್ಥಾನಗಳನ್ನು ಗೆಲ್ಲಬಹುದಾಗಿದೆ. ಆದರೆ ಡಿಎಂಕೆಯ ಪ್ರಮುಖ ವಿರೋಧ ಪಕ್ಷವಾಗಿರುವ ಎಐಎಡಿಎಂಕೆ 2 ಸ್ಥಾನಗಳನ್ನು ಗೆಲ್ಲಬಹುದು.